ಬೆಂಗಳೂರು : ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ನಡುವೆ ಬಿಜೆಪಿ ಹೈಕಮಾಂಡ್ ಶನಿವಾರ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಎರಡನೇ ಪಟ್ಟಿ ಬಿಡುಗಡೆ ಕುರಿತು ಚರ್ಚೆ ನಡೆಯುತ್ತಿದೆ.
ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿಯಲ್ಲಿ 195 ಅಭ್ಯರ್ಥಿಗಳ ಪೈಕಿ ಕರ್ನಾಟಕದಿಂದ ಮೊದಲ ಪಟ್ಟಿಯಲ್ಲಿ ಯಾರಿಗೂ ಸ್ಥಾನ ನೀಡಿಲ್ಲ. ಆದರೆ ಎರಡನೇ ಪಟ್ಟಿಯಲ್ಲಿ ಬಿಜೆಪಿ ಹೈಕಮಾಂಡ್ ಕರ್ನಾಟಕದ ಅಭ್ಯರ್ಥಿಗಳನ್ನ ಘೋಷಣೆ ಮಾಡುವ ಕುರಿತು ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ.
ಎರಡನೇ ಪಟ್ಟಿ ಬಿಡುಗಡೆ ಕುರಿತು ಇಂದು ದೆಹಲಿಯಲ್ಲಿ ಸಭೆ ನಡೆಸಲಿದೆ. ನಾನು ಅಲ್ಲಿಗೆ ಹೋಗುತ್ತಿದ್ದೇನೆ. ಬಹುಶಃ ಕರ್ನಾಟಕವನ್ನು ಒಳಗೊಂಡಿರುವ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಬಹುದು ಆ ಹಿನ್ನಲೆಯಲ್ಲಿ ನಾನು ದೆಹಲಿಗೆ ಹೋಗುತ್ತಿದ್ದೇನೆ. ನಾಳೆಯ ನಂತರ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ರಾಷ್ಟ್ರೀಯ ನಾಯಕರು ಪಟ್ಟಿಯ ಬಗ್ಗೆ ಅಂತಿಮ ನಿರ್ಧಾರ ತೆಗದುಕೊಳ್ಳುತ್ತಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 28 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಬಹುದು, ಯಾವುದೇ ವಿಳಂಬವಾಗುವುದಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಕೆಲವು ಹೊಸ ಮುಖಗಳನ್ನು ಕಣಕ್ಕಳಿಸುವ ಸಾಧ್ಯತೆ ಕುರಿತು ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ನಾಯಕರ ಮನಸ್ಸಿನಲ್ಲಿ ಏನಿದೆ ಎಂಬುದರ ಬಗ್ಗೆ ನನಗೆ ಯಾವುದೇ ಸುಳಿವು ಇಲ್ಲ. ಅಂತಿಮ ನಿರ್ಧಾರವನ್ನು ದೆಹಲಿಯಲ್ಲಿರುವ ನಾಯಕರು ತೆಗೆದುಕೊಳ್ಳುತ್ತಾರೆ ಎಂದರು.
ಬಿಜೆಪಿ ಹೈಕಮಾಂಡ್ ಎರಡನೇ ಪಟ್ಟಿ ಬಿಡುಗಡೆ ಕುರಿತು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾತನಾಡಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಮಾರ್ಚ್ 2 ರಂದು 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿತು.
ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಶಿವಮೊಗ್ಗ – ಬಿ ವೈ ರಾಘವೇಂದ್ರ
ಬೆಂಗಳೂರು ಗ್ರಾಮಾಂತರ – ಡಾಸಿಎನ್ ಮಂಜುನಾಥ್
ಚಿಕ್ಕಬಳ್ಳಾಪುರ – ಡಾ. ಕೆ ಸುಧಾಕರ್ / ಅಲೋಕ್ ವಿಶ್ವನಾಥ್
ಮೈಸೂರು – ಪ್ರತಾಪ್ ಸಿಂಹ / ಸಾರಾ ಮಹೆಶ್
ಚಾಮರಾಜನಗರ – ಡಾ. ಮೋಹನ್ ಕುಮಾರ್ / ಎಸ್ ಬಾಲರಾಜ್
ಬೆಳಗಾವಿ – ಜಗದೀಶ್ ಶೆಟ್ಟರ್
ಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆ
ಬೀದರ್ – ಭಗವಂತ್ ಖೂಬಾ
ಕಲಬುರಗಿ – ಉಮೆಶ್ ಜಾಧವ್
ವಿಜಯಪುರ – ರಮೇಶ್ ಜಿಗಜಿಣಗಿ
ಬಾಗಲಕೋಟೆ -ಪಿಸಿ ಗದ್ದಿಗೌಡರ್
ರಾಯಚೂರು – ರಾಜಾ ಅಮರೇಶ್ವರ್ ನಾಯಕ / ಬಿವಿ ನಾಯಕ
ಕೊಪ್ಪಳ – ಸಂಗಣ್ಣ ಕರಡಿ / ಡಾ ಬಸವರಾಜ್ ಕ್ಯಾವಟರ್
ಧಾರವಾಡ – ಪ್ರಹ್ಲಾದ್ ಜೋಶಿ
ಹಾವೇರಿ – ಬಿಸಿ ಪಾಟೀಲ್ / ಕೆ ಇ ಕಾಂತೇಶ್
ಬಳ್ಳಾರಿ – ಬಿ ಶ್ರೀರಾಮುಲು
ದಕ್ಷಿಣ ಕನ್ನಡ – ನಳೀನ್ ಕುಮಾರ್ ಕಟೀಲ್ / ನಿರ್ಮಲಾ ಸೀತಾರಾಮನ್
ಉತ್ತರ ಕನ್ನಡ – ಅನಂತ ಕುಮಾರ್ ಹೆಗ್ಡೆ , ವಿಶ್ವೇಶ್ವರ ಹೆಗಡೆ ಕಾಗೇರಿ
ಉಡುಪಿ – ಚಿಕ್ಕಮಗಳೂರು – ಶೋಭಾ ಕರಂದ್ಲಾಜೆ
ಚಿತ್ರದುರ್ಗ – ಎ ನಾರಾಯಣಸ್ವಾಮಿ
ದಾವಣಗೆರೆ – ಜಿಎಂ ಸಿದ್ದೇಶ್ವರ್
ತುಮಕೂರು – ವಿ ಸೋಮಣ್ಣ
ಬೆಂಗಳೂರು ಉತ್ತರ – ನಿರ್ಮಲಾ ಸೀತಾರಾಮನ್
ಬೆಂಗಳೂರು – ದಕ್ಷಿಣ – ತೆಜಸ್ವಿ ಸೂರ್ಯ
ಬೆಂಗಳೂರು ಸೆಂಟ್ರಲ್ – ಜೈಶಂಕರ್ / ಪಿಸಿ ಮೋಹನ್