ಬಿಜೆಪಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಲೀನ ಮಾಡೋದಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಗಾವತಿ, ಬಳ್ಳಾರಿ ಮತ್ತು ಕೊಪ್ಪಳ ಭಾಗದಿಂದ ಬಂದಿದ್ದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಜನಾರ್ದನ ರೆಡ್ಡಿ ಪ್ರಕಟಿಸಿದ್ದಾರೆ.
ಈಗಾಗಲೇ ಗಾಲಿ ಜನಾರ್ದನ ರೆಡ್ಡಿ ನಿವಾಸಕ್ಕೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆಗಮಿಸಿ ಮಾತುಕತೆ ನಡೆಸಿದ್ದಾರೆ. ನಾಳೆ ಅಧಿಕೃತವಾಗಿ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರ ಕೆಲಸ ಮಾಡಲು ಜನಾರ್ದನ ರೆಡ್ಡಿ ನಿರ್ಧರಿಸಿದ್ದಾರೆ. ಹೌದು. ಬಿಜೆಪಿ ಪಕ್ಷದಲ್ಲಿ 25ನೇ ವಯಸ್ಸಿನಲ್ಲೇ ಕೆಲಸ ಮಾಡಿದ್ದೇವೆ. ಅಡ್ವಾಣಿಯವರ ರಥಯಾತ್ರೆ ವೇಳೆಯೂ ನಾನು ಬಿಜೆಪಿ ಪಕ್ಷದಲ್ಲಿದ್ದೆ. ತಾಯಿ ಸಮಾನವಾದ ಬಿಜೆಪಿ ಪಕ್ಷ ಮರು ಸೇರ್ಪಡೆಗೂ ಮುನ್ನ ಆಪ್ತರ ಸಭೆ ಮಾಡಿದ್ದೇನೆ. ಏನೇ ಆದರೂ ನಿಮ್ಮ ಜೊತೆ ಇರ್ತೇವೆ ಎಂದು ಆಪ್ತರು ಹೇಳಿದ್ದಾರೆ. ರಾಜ್ಯಾಧ್ಯಕ ಬಿವೈ ವಿಜಯೇಂದ್ರ ಮತ್ತು ಪ್ರಬಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಸಮ್ಮುಖದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಪಕ್ಷಕ್ಕೆ ಮರು ಸೇರ್ಪಡೆಯಾಗ್ತೇನೆ ಎಂದು ಜನಾರ್ದನ ರೆಡ್ಡಿ ಹೇಳಿದರ.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಪಕ್ಷಕ್ಕೆ ಸೇರ್ಪಡೆ ನಾನು ಬಿಜೆಪಿಗೆ ಬಾಹ್ಯ ಬೆಂಬಲವನ್ನ ಕೊಡಬೇಕು ಎಂದಿಕೊಂಡಿದ್ದೆ. ಆದ್ರೆ ಪಕ್ಷದ ರಾಷ್ಟ್ರೀಯ ಮುಖಂಡರು ಪಕ್ಷ ಸೇರ್ಪಡೆಯಾಲೇಬೇಕು ಎಂದರು. ಮೋದಿ, ಅಮಿಶ್ ಶಾ ದೇಶದಲ್ಲಿ ಉತ್ತಮ ಆಡಳಿತ ಕೊಟ್ಟಿದ್ದಾರೆ. ರಷ್ಯಾ ಅಧ್ಯಕ್ಷರೇ ಮೋದಿ ಮತ್ತೊಮ್ಮೆ ಪ್ರಧಾನಿ ಯಾಗ್ತಾರೆ ಎಂದಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಪಕ್ಷಕ್ಕೆ ಸೇರ್ಪಡೆಯಾಗ್ತೇನೆ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ಇದೇ ವರ್ಷ ಫೆಬ್ರವರಿಯಲ್ಲಿ ನಡೆದ ರಾಜ್ಯಸಭಾ ಚುನಾವಣೆ ವೇಳೆ ಜನಾರ್ದನ ರೆಡ್ಡಿ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ್ದರು. ಕಳೆದ ವರ್ಷ ಎಲೆಕ್ಷನ್ ರಿಸಲ್ಟ್ ಬರುತ್ತಿದ್ದಂತೆ ಕಾಂಗ್ರೆಸ್ಗೆ ಬೆಂಬಲ ನೀಡೋದಾಗಿ ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ರು. ಆನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತ್ತೆ ಬಿಜೆಪಿಗೆ ಹತ್ತಿರವಾಗಿದ್ದಾರೆ.