ಬೆಂಗಳೂರು : ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧೀವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ಪ್ರೀಢಂ ಟಿವಿಯ ಎಕ್ಸ್ಕ್ಲೂಸಿವ್ ಸುದ್ದಿ.
ಇಂದು ವಿದಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ಅಧಿವೇಶನ ನಡೆಸಲು ಮತ್ತು ಫೆಬ್ರವರಿ 16ರಂದು ರಾಜ್ಯ ಬಜೆಟ್ ಮಂಡಿಸಲು ನಿರ್ಧರಿಸಲಾಗಿದೆ. ಇದು ಮಹತ್ವದ ಬಜೆಟ್ ಆಗಿದ್ದು, ರಾಜ್ಯದಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಬಜೆಟ್ ಮೇಲೆ ಜನ ಸಾಮಾನ್ಯರ ನಿರೀಕ್ಷೆಯೂ ಹೆಚ್ಚಾಗಿದೆ. ಇನ್ನೂ ಸಿದ್ದರಾಮಯ್ಯ ವಿತ್ತ ಮಂತ್ರಿಯಾಗಿಯೂ ಮುಖ್ಯಮಂತ್ರಿಯಾಗಿಯೂ 15ನೇ ಬಜೆಟ್ ಮಂಡಿಸಲಿದ್ದಾರೆ.
ವಿಧಾನಮಂಡಲ ಅಧಿವೇಶನ ಅಧಿವೇಶನ ಮೊದಲ ದಿನ ಅಂದರೆ ಫೆಬ್ರವರಿ 12ರಂದು ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಲೋಕಸಭೆ ಚುನಾವಣೆಗೆ ಮಾರ್ಚ್ ನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲೆ ಬಜೆಟ್ ಮಂಡಿಸಲು ತೀರ್ಮಾನಿಸಿದ್ದಾರೆ.