
ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಸೇರಿ ಎರಡು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ.
ಮೃತರು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ನಿವಾಸಿಗಳಾಗಿದ್ದಾರೆ. ತಂದೆ ಕಲ್ಲಪ್ಪ ಗಾಣಿಗೇರ (36) ವೃತ್ತಿಯಲ್ಲಿ ಸರ್ಕಾರಿ ಶಿಕ್ಷಕರು, ಮಕ್ಕಳಾದ ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತ ದುರ್ದೈವಿಗಳು.
ಕಲ್ಲಪ್ಪ ಗಾಣಿಗೇರ ನಿಡಗುಂದಿ ಗ್ರಾಮದ ಹುಕ್ಕೇರಿ ತೋಟದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ರಾಯಬಾಗ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ರಾಯಬಾಗ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ




