ಚಿತ್ರದುರ್ಗ : ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಗೆ ರೈತರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರವೂ ಬಜೆಟ್ ನಲ್ಲಿ ಯೋಜನೆಗೆ ಹಣ ತೆಗೆದಿರಿಸಿಲ್ಲ ಎಂದು ಆಕ್ರೋಶಗೊಂಡ ರೈತರು, ವಿ ವಿ ಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಸಲಹಾ ಸಮಿತಿ ಸಭೆಯನ್ನು ಡಿಸಿ ಕಚೇರಿಯಲ್ಲಿ ಸಭೆ ಹಮ್ಮಿಕೊಂಡಿದ್ದು, ಸಚಿವರು ಸಭೆಗೆ ಬರುತ್ತಿದ್ದಂತೆ ರೈತರು ಸಚಿವರಿಗೆ ಘೇರಾವ್ ಹಾಕಿ ಘೋಷಣೆಗಳನ್ನ ಕೂಗಿದರು.