ಚಿತ್ತಾಪೂರದಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಆಯೋಜನೆಗೊಂಡಿದ್ದ ಸಭೆಯಲ್ಲಿ ಪಕ್ಷದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಡೆ ಗಣಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂತು. ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆ ಬಂದಾಗ ಗ್ರಾಮಗಳಲ್ಲಿ ಜಗಳವಾಡಿ ಮತ ಹಾಕಿಸುತ್ತೇವೆ. ಆದರೆ ಕಾರ್ಯಕರ್ತರನ್ನು ಕೇವಲ ಚುನಾವಣೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದರು. ಪಕ್ಷದಲ್ಲಿ ಸಮಸ್ಯೆ ಹೀಗೆ ಮುಂದುವರಿದರೆ ಚುನಾವಣೆ ಎದಿರಿಸೋದು ಹೇಗೆ ಎಂದು ಪ್ರಶ್ನಿಸಿದರು. ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ಎದುರೇ ಮುಖಂಡರು, ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಚಿತ್ತಾಪೂರ ಬಿಜೆಪಿ ಮುಖಂಡ ಶರಣಗೌಡ ಹಾಗೂ ಅಯ್ಯಪ್ಪ ನಡುವೆ ವಾಗ್ವಾದ ಕೂಡಾ ನಡೆಯಿತು.