ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅನಾರೋಗ್ಯಕ್ಕೆ ತುತ್ತಾಗಿದ್ದು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ ಇಂದು ಬೆಳಗ್ಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆಂದು ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಅಮಿತಾಬ್ ಬಚ್ಚನ್ ಅವರಿಗೆ ಈಗ 81 ವರ್ಷ ವಯಸ್ಸಾಗಿದೆ. ಅವರಿಗೆ ಈ ಹಿಂದೆಯೂ ಸರ್ಜರಿಯಾಗಿದ್ದು ಚೇತರಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಅನಾರೋಗ್ಯಕ್ಕೆ ಅಮಿತಾಬ್ ಬಚ್ಚನ್ ಗುರಿಯಾಗಿರೋದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ಅವರ ಪತ್ನಿ ಜಯಾ ಬಚ್ಚನ್ ಬಿಗ್ ಬಿ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು.
ಅಮಿತಾಬ್ ಬಚ್ಚನ್ ಗೆ ಇದು ಸವಾಲಿನ ಸಮಯ. ಕಷ್ಟದ ಕಾಲದಲ್ಲಿ ಅವರೊಂದಿಗೆ ಮೌನವಾಗಿ ಇರಬೇಕು ಎಂದು ಭಾವುಕರಾಗಿ ಮಾತನಾಡಿದ್ದರು. ಅಮಿತಾಬ್ ಬಚ್ಚನ್ ಅವರ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನ ಎದುರಿಸಿದ್ದು, ಈಗ ಮತ್ತೊಂದು ಕಷ್ಟದಲ್ಲಿ ಸಿಲುಕ್ಕಿದ್ದಾರೆ.