
2024-25ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಅಂತಾರಾಷ್ಟ್ರೀಯ ಹೂವಿನ ಮಾರುಕಟ್ಟೆಯನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಬೇಕು ಎಂದು ಹೂವು ಬೆಳೆಗಾರರು ಹಾಗೂ ರೈತರ ಪರವಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೆವು. ಈಗ ಬಜೆಟ್‌ನಲ್ಲಿ ಸಿಎಂ ಘೋಷಣೆ ಮಾಡಿದ್ದು, ಸಮಸ್ತ ರೈತರ ಪರವಾಗಿ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ
ಈ ಬಜೆಟ್‌ನಲ್ಲಿ ಜನಸಾಮಾನ್ಯರ ಮೇಲೆ ಯಾವುದೇ ರೀತಿಯ ತೆರಿಗೆಯನ್ನು ವಿಧಿಸಲಾಗಿಲ್ಲ. ಕರ ಭಾರ ಇಲ್ಲದ ಬಜೆಟ್ ಇದಾಗಿದೆ. ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿರುವ ರಾಜ್ಯದ ಜನತೆಗೆ ಅನುಕೂಲವಾಗುವ, ಅಭಿವೃದ್ಧಿ ಪಥದಲ್ಲಿ ಸಾಗುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬಜೆಟ್ ಅನ್ನು ಮಂಡಿಸಿದೆ. ಬೆಂಗಳೂರು ಸೇರಿದಂತೆ ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ, ಹಳೇ ಮೈಸೂರು ಸೇರಿದಂತೆ ಎಲ್ಲ ಭಾಗಗಳಿಗೆ ಒತ್ತನ್ನು ನೀಡಲಾಗಿದೆ. ವಿಶೇಷವಾಗಿ ರೈತರಿಗೆ ಆರ್ಥಿಕ ನೆರವನ್ನು ನೀಡಲಾಗಿದೆ. ಸುಮಾರು 36ಲಕ್ಷ ರೈತರಿಗೆ 27 ಸಾವಿರ ಕೋಟಿ ರೂಪಾಯಿ ಸಾಲವನ್ನು 21 ಡಿಸಿಸಿ ಬ್ಯಾಂಕ್‌ಗಳ ಮೂಲಕ ವಿತರಣೆ ಮಾಡುವ ಬಗ್ಗೆ . ಒಟ್ಟಾರೆ, ರೈತರು, ಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗಗಳ ಅಭಿವೃದ್ಧಿಗೆ ಪೂರಕವಾದ ಹಾಗೂ ಜನಪರವಾದ ಬಜೆಟ್ ಇದು ಶಾಸಕ ದಿನೇಶ್ ಗೂಳಿಗೌಡ ಎಂದು ಹೇಳಿದರು.




