ಲೋಕಸಭಾ ಚುನಾವಣೆಗೆ ತಿಂಗಳು ಮಾತ್ರ ಬಾಕಿ ಇದೆ. ಚುನಾವಣಾ ದಿನಾಂಕ ಘೋಷಣೆಗೆ ಕೇವಲ 2 ವಾರ ಬಾಕಿ ಇದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಫ್ರೀಜ್ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಐಸಿಸಿ ಖಜಾಂಚಿ ಅಜಯ್ ಮಾಕನ್, ಬಿಜೆಪಿ ಸರ್ಕಾರದ ವಿರುದ್ದ ಆರೋಪ ಮಾಡಿದ್ರು. ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜಕೀಯ ಉದ್ದೇಶಕ್ಕಾಗಿ ಬಿಜೆಪಿ ಸರ್ಕಾರ ಈ ಷಡ್ಯಂತ್ರ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಯೂತ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷ 210 ಕೋಟಿ ರೂಪಾಯಿ ತೆರಿಗೆ ಪಾವತಿ ಬಾಕಿ ಉಳಿಸಿಕೊಂಡಿತ್ತು. ತಕ್ಷಣ ಈ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಸೂಚಿಸಿತ್ತು. ಇದಕ್ಕಾಗಿ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ ಎನ್ನಲಾಗಿತ್ತು. ಇದೀಗ ಬ್ಯಾಂಕ್‌ಗಳು ಚೆಕ್ ಸ್ವೀಕರಿಸುತ್ತಿಲ್ಲ. ನಮ್ಮ ಬ್ಯಾಂಕ್ ಖಾತೆಗಳು ಸ್ಥಗಿತಗೊಳಿಸಲಾಗಿದೆ ಎಂದು ಮಾಕೆನ್ ಆರೋಪಿಸಿದ್ರು.
ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಬಿಜೆಪಿ ಅಕ್ರಮವಾಗಿ ಹಣ ಸಂಗ್ರಹ ಮಾಡಿದೆ. ನಾವು ಕ್ರೌಡ್ ಫಂಡಿಂಗ್ ಮೂಲಕ ಕಾಂಗ್ರೆಸ್ ನ್ಯಾಯಸಮ್ಮತವಾಗಿ ಹಣ ಸಂಗ್ರಹಿಸಿದೆ. ಆದರೆ ಬಿಜೆಪಿ ಲೋಕಸಭಾ ಚುನಾವಣೆ ಸಮೀಪದಲ್ಲಿ ಪಕ್ಷದ ಖಾತೆ ಫ್ರೀಜ್ ಮಾಡಿ ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡಿದೆ ಎಂದು ಖರ್ಗೆ ಆಕ್ರೋಶ ಹೊರಹಾಕಿದ್ದರು.
ಕಾಂಗ್ರೆಸ್ ಬ್ಯಾಂಕ್ ಖಾತೆ ಸೀಜ್ ಬೆನ್ನಲ್ಲೇ ಇದೀಗ ಆದಾಯ ತೆರಿಗೆ ಇಲಾಖೆ ಸೀಜ್ ಮಾಡಿದ್ದ ನಾಲ್ಕು ಖಾತೆಗಳನ್ನ ಮತ್ತೆ ರಿಲೀಸ್ ಮಾಡಿದೆ. ಈ ಬೆಳವಣಿಗೆ ನಡುವೆ ಆದಾಯ ತೆರಿಗೆ ಇಲಾಖೆ ವಿಚಾರಣೆ ಬಳಿಕ ಇದೀಗ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸಕ್ರಿಯ ಮಾಡಲಾಗಿದೆ. ಮುಂದಿನ ವಿಚಾರಣೆ ವರೆಗೆ ಕಾಂಗ್ರೆಸ್ ಬ್ಯಾಂಕ್ ಖಾತೆಗಳು ಅನ್ಲಾಕ್ ಆಗಿವೆ. ಈ ಬೆಳವಣಿಗೆ ರಾಜಕೀಯ ಪ್ರೇರಿತವಾ ಎಂಬ ಚರ್ಚೆ ನಡೆಯುತ್ತಿದೆ.