ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮತ್ತು ರಾಹುಲ್ ಗಾಂಧಿಗೆ ಇದೀಗ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಜಾಹೀರಾತಿನಲ್ಲಿ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು ಕೇಂದ್ರ ಮತ್ತು ರಾಜ್ಯದ ಅಧಿಕಾರದ ಚುಕ್ಕಾಣಿಯಲ್ಲಿದ್ದ ಬಿಜೆಪಿ ಸರ್ಕಾರದ ಕುರಿತು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿಯವರು ಜಾಹೀರಾತಿನಲ್ಲಿ ಉಲ್ಲೇಖಿಸಿದ್ರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್ ಕುಮಾರ್ ಖಾಸಗಿ ದೂರು ಸಲ್ಲಿಸಿದ್ರು
ವಕೀಲ ವಿನೋದ್ ಕುಮಾರ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಜಾಹೀರಾತಿನ ವಿರುದ್ಧವಾಗಿ ದೂರು ಸಲ್ಲಿಸಿದ್ರು. ಅದ್ರಂತೆ ವಿಚಾರಣೆ ನಡೆಸಿ ಘನ ನ್ಯಾಯಾಲಯ, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿಯವರಿಗೆ ಮಾರ್ಜ್ 28ಕ್ಕೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.