ದಾವಣಗೆರೆ : ರಾಜ್ಯದ ಹಲವು ರಾಜ್ಯದಲ್ಲಿ ಪಂಚಮಸಾಲಿಗಳ ಸಂಖ್ಯೆ ಹೆಚ್ಚು ಇದೆ. ಅದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಆದ್ಯತೆಯನ್ನು ಪಂಚಮಸಾಲಿಗಳಿಗೆ ನೀಡಬೇಕು ಎಂದು ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಆಗ್ರಹಿಸಿದರು.
ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸಮುದಾಯದವರು 80 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ ಆದ್ದರಿಂದ ಎರಡು ರಾಷ್ಟ್ರೀಯ ಪಕ್ಷಗಳು ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ನೀಡಬೇಕು ಎಂದರು. ನಮ್ಮ ಸಹೋದರ ಸಮುದಾಯದವರ ಸಂಖ್ಯೆ ಕಡಿಮೆ ಇದ್ದರೂ ಅವರಿಗೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ. ಆದ್ದರಿಂದ ನಮ್ಮಸಮಾಜಕ್ಕೂ ಹೆಚ್ಚಿನ ಆದ್ಯತೆ ನೀಡುವಂತೆ ವಚನಾನಂದ ಸ್ವಾಮೀಜಿ ಒತ್ತಾಯಿಸಿದರು.