ಸುದ್ದಿ

ಮೋದಿ ಸರ್ಕಾರದ ವಿರುದ್ಧ ಅನ್ನದಾತರ ಕಹಳೆ: ದೆಹಲಿಯ ಸುತ್ತ ಪೊಲೀಸ್ ಚಕ್ರವ್ಯೂಹ ರಚನೆ

ದೆಹಲಿ: ಕೃಷಿ ಉತ್ನನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಕೆರಳಿ ಕೆಂಡಕಾರಿರುವ ನೇಗಿಲಯೋಗಿಗಳಿಂದು ದೆಹಲಿ ಚಲೋ ಪ್ರತಿಭಟನೆ ಮಾಡಲು ರಾಷ್ಟ್ರ ರಾಜಧಾನಿಯತ್ತ ದಾಂಗುಡಿ ಇಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಅನ್ನದಾತರು ರೊಚ್ಚಿಗೆದ್ದಿದ್ದಾರೆ. ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗೆ ಕಾನೂನು ಜಾರಿ ಸೇರಿ ಹಲವು ಬೇಡಿಕೆಗಳ ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ದೆಹಲಿ ಚಲೋಗೆ ಕರೆ ನೀಡಿವೆ. ಇದಕ್ಕೆ ದೇಶದ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಲಕ್ಷಾಂತರ ರೈತರು ದೆಹಲಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ರೈತರ ಪ್ರತಿಭಟನೆ ಹಿನ್ನೆಲೆ ಸಿಂಘು, ಘಾಜಿಪುರ್, ಟಿಕ್ರಿ ಗಡಿಯಲ್ಲಿ ಸಂಚಾರ ನಿರ್ಬಂಧಿಸಿರುವ ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ಬೃಹತ್ ಗಾತ್ರದ ಬ್ಯಾರಿಕೇಡ್, ಕಾಂಕ್ರಿಟ್ ಗೋಡೆ ನಿರ್ಮಿಸಿದ್ದಾರೆ. ರಸ್ತೆಯಲ್ಲಿ ಕಬ್ಬಿಣದ ಚೂಪಾದ ರಾಡ್‌ಗಳನ್ನು ಹಾಕಿದ್ದಾರೆ. ಇಂಟರ್‌ನೆಟ್ ಸ್ಥಗಿತಗೊಳಿಸಿ ದೆಹಲಿ ಸುತ್ತಲೂ ಪೊಲೀಸರು ಸುತ್ತುವರೆದಿದ್ದಾರೆ.


ಉತ್ತರ ಪ್ರದೇಶದಿಂದ ದೆಹಲಿಗೆ ಸಂಪರ್ಕಿಸುವ ಘಾಜಿಪುರ ಗಡಿಯಲ್ಲಿ ಹೆದ್ದಾರಿಯಲ್ಲೇ ಸಿಮೆಂಟ್ನಿಂದ ಹೊಸ ತಡೆಗೋಡೆ ನಿರ್ಮಿಸಿ ರೈತರನ್ನು ತಡೆಯಲು ಪ್ಲ್ಯಾನ್ ಮಾಡಲಾಗಿದೆ. ಖಾಕಿ ತಡೆಗೋಡೆ ತಂತ್ರ ಭೇದಿಸಲು, ಪಂಜಾಬ್ ರೈತರು ಸಜ್ಜಾಗಿದ್ದಾರೆ. ಟ್ರ್ಯಾಕ್ಟರ್ಗಳನ್ನು ಮಾಡಿಫೈ ಮಾಡಿಕೊಂಡು ಹೋರಾಟಕ್ಕೆ ಸಜ್ಜಾಗಿದ್ದಾರೆ. ಪೊಲೀಸರಿಗೆ ಕೌಂಟರ್ ಪ್ಲ್ಯಾನ್ ಮಾಡಿರೋ ರೈತರು, ವಿಶೇಷ ವಾಹನಗಳನ್ನ ಸಿದ್ಧಗೊಳಿಸಿದ್ದಾರೆ. ಅಶ್ರುವಾಯು ವಿರುದ್ಧ ಹೋರಾಡಲು ಬೆಂಕಿ-ನಿರೋಧಕ ಹಾರ್ಡ್-ಶೆಲ್ ಟ್ರೇಲರ್‌ಗಳನ್ನು ಅಭಿವೃದ್ಧಿಪಡಿಸಿದ್ದಾರೆ.

 

https://www.youtube.com/watch?v=YqIuTjIegIk

Comments (0)

Your email address will not be published. Required fields are marked *

Back to top button