Sunday, September 14, 2025
20.8 C
Bengaluru
Google search engine
LIVE
ಮನೆರಾಜ್ಯಹೆತ್ತ ಮಕ್ಕಳನ್ನೇ ಕತ್ತು ಹಿಸುಕಿ‌ ಕೊಂದ‌ ತಾಯಿ..!

ಹೆತ್ತ ಮಕ್ಕಳನ್ನೇ ಕತ್ತು ಹಿಸುಕಿ‌ ಕೊಂದ‌ ತಾಯಿ..!

ಧಾರವಾಡ : ತಾಯಿಯೊಬ್ಬರು ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಸಾಮೂಹಿಕ ಸಾವು ಸಂಭವಿಸಿದೆ.

ಸಾವಿತ್ರಿ ಸರಕಾರ (32) ಎಂಬವರೇ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡವರು. ಐದು ವರ್ಷದ ಮಗಳು ಸುಮ ಮತ್ತು ನಾಲ್ಕು ವರ್ಷದ ಮಗು ದರ್ಶನ್​ ತಾಯಿಯ ಕೈಯಿಂದಲೇ ಕೊಲೆಯಾದ ದುರ್ದೈವಿ ಮಕ್ಕಳು. ಮಕ್ಕಳನ್ನು ಕೊಂದ ಬಳಿಕ ಆಕೆ ತಾನೇ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿ ತಾಯಿಯೊಬ್ಬಳು ಮಕ್ಕಳನ್ನು ಕೊಂದು ತಾನೂ ಪ್ರಾಣ ಕಳೆದುಕೊಳ್ಳಲು ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments