ಧಾರವಾಡ: ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ನಿನ್ನೆ (ಶನಿವಾರ) ಸಂಜೆ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಬೆಂಗಳೂರಿಗೆ ವರ್ಗಾವಣೆ ಆಗಿದ್ದು, ಅವರ ಸ್ಥಳಕ್ಕೆ ಹಿರಿಯ ಐಎಎಸ್ ಅಧಿಕಾರಿ ದಿವ್ಯಪ್ರಭು ಜೆ.ಆರ್.ಜಿ ಅವರನ್ನು ನೇಮಕಗೊಳಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ತಮಿಳುನಾಡು ಮೂಲದ ದಿವ್ಯಪ್ರಭು 2014ನೇ ಸಾಲಿನ ಐಎಎಸ್ ಬ್ಯಾಚ್‌ನ ಅಧಿಕಾರಿ. ಈಗಾಗಲೇ ವಿವಿಧ ಆಡಳಿತಾತ್ಮಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಲಿಂಗಸಗೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಆರಂಭಿಸಿದ ಇವರು, ಬಳ್ಳಾರಿ ಮಹಾನಗರಪಾಲಿಕೆ ಆಯುಕ್ತರಾಗಿ, ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.ದಿವ್ಯಪ್ರಭು ಚಿತ್ರದುರ್ಗ ಜಿಲ್ಲಾಧಿಕಾರಿಗಳಾಗಿದ್ದಾಗ ಚುನಾವಣಾ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಿದ್ದಕ್ಕಾಗಿ ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಪ್ರಶಸ್ತಿ ಮತ್ತು ರಾಷ್ಟ್ರೀಯ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಇವರ ನೇತೃತ್ವದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಉತ್ತಮ ಸಾಧನೆ ಮಾಡಿದ್ದು ಕೇಂದ್ರ ಸರಕಾರದ ಸ್ವಚ್ಛ ಸರ್ವೇಕ್ಷಣಾ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ.