ಧಾರವಾಡ: ಸಂಸದ ಅನಂತಕುಮಾರ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲೇ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಚಿವ ಎಚ್.ಕೆ.ಪಾಟೀಲ ಪ್ರತಿಕ್ರಿಯೆ ನೀಡಿದ್ರು.
ಇವರೆಲ್ಲ ರಾಜಕಾರಣವನ್ನು ಈ ಮಟ್ಟಕ್ಕೆ ತೆಗೆದುಕೊಂಡು ಹೋದರೆ ಹೇಗೆ? ಎಂದು ಪ್ರಶ್ನೆ ಮಾಡಿದರು. ರಾಮಮಂದಿರ ಉದ್ಘಾಟನೆಗೆ ಶಂಕರಾಚಾರ್ಯರು ಬಂದರೆ ಬರಲಿ ಬಿಟ್ಟರೆ ಬಿಡಲಿ, ಯಾವ ಸ್ವಾಮೀಜಿ ಬೇಕಾದರೆ ಬಂದರೆ ಬರಲಿ ಬಿಟ್ಟರೆ ಬಿಡಲಿ ಎನ್ನುವ ಮಾತುಗಳನ್ನು ಬಿಜೆಪಿಯವರು ಆಡುತ್ತಾರೆ. ಇವರ ಮಾತುಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಅದು ಅವರ ಸಂಸ್ಕೃತಿ ತೋರಿಸುತ್ತದೆ ಎಂದು ಕಿಡಿಕಾರಿದರು.