ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರವು ದಿನ ಕಳೆದಂತೆ ರಂಗು ಪಡೆದುಕೊಳ್ಳುತ್ತಿದೆ. ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳಿಗೆ ಕ್ಷೇತ್ರ ಸಂಚಾರ ಮೂಲಕ ಚುನಾವಣೆ ತಯಾರಿಗೆ ಸಿದ್ಧರಾಗಲು ಮೌಖಿಕವಾಗಿ ಸೂಚನೆ ನೀಡಿದ ಬೆನ್ನಲ್ಲೇ, ಲೋಕಸಭಾ ಟಿಕೆಟ್ ಆಕಾಂಕ್ಷಿಗಳು ಕೇತ್ರ ಸಂಚಾರದಲ್ಲಿ ಬ್ಯೂಸಿಯಾಗಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಾವೇರಿ ಜಿಲ್ಲೆಯ ಬಂಕಾಪುರ ಪಟ್ಟಣಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಜತ್ ಉಳ್ಳಾಗಡ್ಡಿಮಠ ತಮ್ಮ ಪಕ್ಷದ ನಾಯಕರೊಂದಿಗೆ ಕಾರ್ಯಕರ್ತರನ್ನು ಭೇಟಿ ಮಾಡಿದರು.
ಹಾವೇರಿ ಜಿಲ್ಲೆಯ ಬಂಕಾಪುರ ಪಟ್ಟಣದ ಅರಳೇಶ್ವರ ಮಠಕ್ಕೆ ಭೇಟಿ ನೀಡಿದ, ರಜತ್ ಉಳ್ಳಾಗಡ್ಡಿಮಠ ಶ್ರೀ ರೇವಣ್ಣ ಸಿದ್ದೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು. ಬಳಿಕ ಪಕ್ಷದ ಮುಖಂಡರ ನಿವಾಸಕ್ಕೆ ತೆರಳಿ ಲೋಕಸಭಾ ಚುನಾವಣೆಯ ತಯಾರಿ ಕುರಿತು ಪಕ್ಷದ ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಿ, ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದರು.
ಇನ್ನೂ ಈ ಸಂದರ್ಭದಲ್ಲಿ ಬಂಕಾಂಪುರ ಪಟ್ಟಣದ ಕಾಂಗ್ರೆಸ್‌ನ ಮುಖಂಡರಾದ ಬಿಸಿ ಪಾಟೀಲ್ , ಸುಲೇಮಾನ್ ಖಜಖಾನ್ ,ಚಂದ್ರು ಕೊಡ್ಲಿವಾಡ, ವಿಜಯ್ ಪಾಟೀಲ್, ಬಾಬರ್ ಬಾವೋಜಿ, ಗದಿಗೆಪ್ಪ, ಚನ್ನು ದೇಸಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.