Wednesday, April 30, 2025
24 C
Bengaluru
LIVE
ಮನೆರಾಜಕೀಯಕಾಂಗ್ರೆಸ್‌ ಮತಕ್ಕಾಗಿ ದೇಶವನ್ನು ಮಾರುತ್ತಾರೆ : ಅರವಿಂದ ಬೆಲ್ಲದ

ಕಾಂಗ್ರೆಸ್‌ ಮತಕ್ಕಾಗಿ ದೇಶವನ್ನು ಮಾರುತ್ತಾರೆ : ಅರವಿಂದ ಬೆಲ್ಲದ

ಧಾರವಾಡ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ ಕೊಟ್ಟ ಹೇಳಿಕೆಗೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ತಿರುಗೇಟು ಕೊಟ್ಟಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಈ ಕಾಂಗ್ರೆಸ್‌ನವರು ಮತಕ್ಕಾಗಿ ದೇಶವನ್ನೂ ಮಾರಲು ಹಿಂದೆ ಮುಂದೆ ನೋಡುವುದಿಲ್ಲ. ತಮ್ಮ ಮತಕ್ಕಾಗಿ ಯಾವುದೇ ಹಂತಕ್ಕೂ ಇಳಿಯಲು ಅವರ ತಯಾರಾಗಿದ್ದಾರೆ. ಮತದ ಆಸೆಗೆ ದೇಶ ಬೇರ್ಪಡಿಸುವ ಹೇಳಿಕೆ ನೀಡಿದ್ದಾರೆ. ಪುರಾಣ ಕಾಲದಿಂದ ನಮ್ಮ ದೇಶವಿದೆ. ಮೊದಲಿನಿಂದಲೂ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನಮ್ಮ ದೇಶವಿದೆ. ದಕ್ಷಿಣ ಭಾರತ ರಾಜ್ಯಗಳೇ ಹೆಚ್ಚು ಬೆಳವಣಿಗೆಯಾಗಿವೆ. ಕರ್ನಾಟಕ ಮತ್ತು ತಮಿಳುನಾಡು ದೊಡ್ಡ ಜಿಎಸ್‌ಟಿ ರಾಜ್ಯಗಳು. ದೊಡ್ಡ ಸುಶಿಕ್ಷಿತರ ರಾಜ್ಯ ಕೇರಳ. ವೇಗವಾಗಿ ಅಭಿವೃದ್ಧಿಯಾದ ರಾಜ್ಯಗಳಲ್ಲಿ ತೆಲಂಗಾಣವಿದೆ. ದಕ್ಷಿಣ ಭಾರತ ರಾಜ್ಯಗಳು ಹೆಚ್ಚು ಅಭಿವೃದ್ಧಿ ಆಗಿವೆ. ಜನರನ್ನು ದಾರಿ ತಪ್ಪಿಸುವ ಈ ರೀತಿಯ ಹೇಳಿಕೆಯನ್ನು ಸುರೇಶ ಅವರಿಂದ ನಾನು ನಿರೀಕ್ಷಿಸಿರಲಿಲ್ಲ ಎಂದರು.

ಸಿದ್ದರಾಮಯ್ಯ ಕೂಡ ಇಂತಹ ಕೆಲಸ ಮಾಡಿದರು. ಮೆಟ್ರೋದಲ್ಲಿ ಇಂಗ್ಲಿಷ್ ನಡೆಯುತ್ತದೆ. ಆದರೆ, ಇವರು ಹಿಂದಿ ಬೋರ್ಡ್ ವಿರೋಧಿಸಿದ್ದರು. ಹಿಂದಿ ಹೇರಿಕೆ ಎಂದು ಗದ್ದಲ ಎಬ್ಬಿಸಿದ್ದರು. ನಂದಿನಿ, ಅಮೂಲ್ ಹಾಲಿನ ವಿಷಯ ಎತ್ತಿದ್ದರು. ಮತಕ್ಕಾಗಿ ದೇಶ ಮಾರುವುದಕ್ಕೂ ಹೇಸಿಗೆ ಪಡದವರು ಈ ಕಾಂಗ್ರೆಸ್‌ನವರು. ಡಿಕೆಸು ತಮ್ಮ ತಪ್ಪು ಒಪ್ಪಿ, ಅವರ ಹೇಳಿಕೆಯನ್ನು ವಾಪಸ್ ಪಡೆಯಬೇಕು. ದೇಶದ ಹಿತದೃಷ್ಟಿಯಿಂದ ಇಂತಹ ಹೇಳಿಕೆಗಳು ಸರಿಯಲ್ಲ. ಜವಾಬ್ದಾರಿ ಸ್ಥಾನದಲ್ಲಿದ್ದವರು ಇಂತಹ ಹೇಳಿಕೆ ನೀಡಬಾರದು. ಖರ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಖರ್ಗೆ ಅವರೇ ಡಿಕೆಸು ಹೇಳಿಕೆ ಸರಿಯಲ್ಲ ಎಂದು ಹೇಳಬೇಕು. ಕೆಲವರು ಈ ಹೇಳಿಕೆಯನ್ನು ಸಮರ್ಥನೆ ಕೂಡ ಮಾಡಿಕೊಂಡಿದ್ದಾರೆ. ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತಾಗಿದೆ. ಒಬ್ಬರು ಹೇಳಿದ್ದನ್ನು ಇನ್ನೊಬ್ಬರು ಹೇಳುತ್ತ ಹೊರಟಿದ್ದಾರೆ ಎಂದರು.

ಎಂಪಿ ಚುನಾವಣೆಗಲ್ಲಿ ಕಾಂಗ್ರೆಸ್ ತಾನು ಗೆಲ್ಲುವುದಿಲ್ಲ ಎಂದು ತನಗೆ ಗ್ಯಾರಂಟಿಯಾಗಿದೆ. ಅದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ವಾಪಸ್ ಪಡೆಯುವ ಮಾತು ಹೇಳುತ್ತಿದ್ದಾರೆ. ಅವರ ಉದ್ದೇಶ ಜನರಿಗೂ ಅರ್ಥವಾಗಿದೆ. ಇನ್ನು ಲಕ್ಷ್ಮಣ ಸವದಿ ಮತ್ತು ಜನಾರ್ಧನ ರೆಡ್ಡಿ ಬಿಜೆಪಿಗೆ ಸೇರುತ್ತಾರೆ ಎಂಬುದನ್ನು ಕಾದು ನೋಡಿ. ದಿನಕಳೆದಂತೆ ಎಲ್ಲವೂ ಗೊತ್ತಾಗುತ್ತದೆ. ಈಗಲೇ ಅದರ ಬಗ್ಗೆ ಮಾತನಾಡುವುದು ಬೇಡ ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments