ಬೆಂಗಳೂರು : ಪತಿ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಜೋತು ಬಿದ್ದಿದ್ದ ಡಿಷ್ ಕೇಬಲ್ ಕತ್ತಿಗೆ ಸಿಕ್ಕಿ ಮಹಿಳೆ ಮೃತಪಟ್ಟಿರುವ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಇಪ್ಪಾಡಿ ಸಮೀಪ ಇಂದು ಸಂಜೆ ಸಂಭವಿಸಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ಚಿಂಚಲಕಟ್ಟೆ ನಿವಾಸಿ ಲಕ್ಷಿಭಾಯಿ ಜಾದವ್ (36) ಮೃತ ಪಟ್ಟ ದುರ್ದೈವಿಯಾಗಿದ್ದು, ಕುಣಿಗಲ್ ಪೋಲಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಬೆಸ್ಕಾಂ ನಿರ್ಲಕ್ಷ್ಯದಿಂದ ಸಂಭವಿಸಿಲ್ಲ. ಡಿಷ್ ಕೇಬಲ್ ನಲ್ಲಿ ವಿದ್ಯುತ್ ಪ್ರವಹಿಸುತಿರಲಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಕೆಲವು ಮಾಧ್ಯಮದಲ್ಲಿ ಈ ಘಟನೆ ಬೆಸ್ಕಾಂ ನಿರ್ಲಕ್ಷ್ಯದಿಂದ ಆಗಿದೆ ಎಂಬ ಮಾಹಿತಿ ಸತ್ಯಕ್ಕೆ ದೂರವಾಗಿದೆ ಎಂದು ಬೆಸ್ಕಾಂ ತಿಳಿಸಿದೆ.