ಮನರಂಜನೆಸಿನಿಮಾ

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್​

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​  ಅವರು ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ಅವರ ಆರೋಗ್ಯದ ಬಗ್ಗೆ ಡಿಕೆಶಿ ವಿಚಾರಿಸಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ  ಅವರು ಪಶು ಆಸ್ಪತ್ರೆ  ನಿರ್ಮಿಸಿದ್ದಾರೆ. ಇಂದು (ನವೆಂಬರ್​ 28) ಅದರ ಉದ್ಘಾಟನೆ ಮಾಡುವ ಸಲುವಾಗಿ ಆಗಮಿಸಿರುವ ಡಿ.ಕೆ. ಶಿವಕುಮಾರ್​ ಅವರು ಹಿರಿಯ ಕಲಾವಿದೆಯ ಮನೆಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಲೀಲಾವತಿ ಅವರ ಪುತ್ರ ವಿನೋದ್​ ರಾಜ್​ ಜೊತೆ ಡಿಕೆಶಿ ಮಾತನಾಡಿದ್ದಾರೆ. ಲೀಲಾವತಿ ಅವರಿಗೆ ಈಗ 86 ವರ್ಷ ವಯಸ್ಸು. ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿದೆ.

ಒಂದು ಕಾಲದಲ್ಲಿ ಲೀಲಾವತಿ ಅವರು ಬಹುಬೇಡಿಕೆಯ ನಟಿಯಾಗಿದ್ದರು. ನಾಯಕಿಯಾಗಿ ಮಿಂಚಿದ್ದ ಅವರು ನಂತರದಲ್ಲಿ ಪೋಷಕ ಪಾತ್ರಗಳನ್ನು ಒಪ್ಪಿಕೊಂಡರು. ಅಂದಾಜು 650 ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಪ್ರಮುಖ ಕಲಾವಿದರ ಜೊತೆ ಅವರು ತೆರೆಹಂಚಿಕೊಂಡಿದ್ದಾರೆ. ನಟನೆ ಮಾತ್ರವಲ್ಲದೇ ಕೃಷಿಯಲ್ಲೂ ಅವರಿಗೆ ಅಪಾರ ಆಸಕ್ತಿ ಇತ್ತು. ಕಳೆದ ಅನೇಕ ವರ್ಷಗಳಿಂದ ಸೋಲದೇವನಹಳ್ಳಿಯಲ್ಲಿ ಅವರು ಕೃಷಿ ಮಾಡುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಇನ್ನಷ್ಟು ಹದಗೆಟ್ಟಿದೆ.

Comments (0)

Your email address will not be published. Required fields are marked *

Back to top button