ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಿಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ತಿಳಿಸಿದರು.
ನಿಗಮ ಮಂಡಳಿ ನೇಮಕ ವಿಚಾರ
ಇನ್ನೂ ನಿಗಮ ಮಂಡಳಿ ನೇಮಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕಶಿವಕುಮಾರ್ ಇಂದು ನಮ್ಮ ಪಾರ್ಟಿ ಮಿಟೀಂಗ್ ಮಾಡಿ ಮೂರು ಹಂತದಲ್ಲಿ ನಿಗಮ ಮಂಡಳಿ ನೇಮಕ ಮಾಡುತ್ತೇವೆ. ಶಾಸಕರಿಗೆ ಮೊದಲ ಪಟ್ಟಿಯಲ್ಲಿ ಫೈನಲ್ ಮಾಡಿದ ನಂತರ ಕಾರ್ಯಕರ್ತರಿಗೆ ನಿಗಮ ಮಂಡಳಿ ನೀಡುತ್ತೇವೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಕೇರಳದಲ್ಲಿ ಕೋವಿಡ್ ಹೆಚ್ಚಳದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾರು ಗಾಬರಿಯಾಗೋದು ಬೇಡ. ಆರೋಗ್ಯ ಇಲಾಖೆ ಈಗಾಗಲೇ ಮುಂಜಾಗೃತ ಕ್ರಮ ತೆಗದುಕೊಂಡಿದ್ದಾರೆ ಎಂದರು. ಮಾಧ್ಯಮಗಳಿಗೆ ಮನವಿ ಮಾಡುತ್ತೇನೆ. ಏನೇ ಇದ್ದರೂ ನಾವು ನಿಮಗೆ ಅಪ್ಡೇಟ್ ಮಾಡುತ್ತೇನೆ. ಕೋರೊನಾ ಇನ್ನು ನಮ್ಮಲ್ಲಿ ಇಲ್ಲಾ. ಜನ ಈಗಾಗಲೇ ಮಾಸ್ಕ್ ಹಾಕುತ್ತಿದ್ದಾರೆ. ಸದ್ಯಕ್ಕೆ ಕೊರೋನಾ ವಿಷಯ ನಮ್ಮ ರಾಜ್ಯಕ್ಕೆ ಇಲ್ಲಾ ಎಂದು ದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.