ಬೆಂಗಳೂರು- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕೃತ ಎಫ್‌ಎಸ್‌ಎಲ್‌ ವರದಿಯನ್ನು ಆಧಾರವಾಗಿಟ್ಟುಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದರು.

ಸದಾಶಿವನಗರದ ತಮ್ಮ‌ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಪರಂ , ಎಫ್‌ಎಸ್‌ಎಲ್ ವರದಿ ಬಂದ ನಂತರ‌ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಸದನದಲ್ಲಿ ಉತ್ತರಿಸಿದ್ದೆನು. ವರದಿಯಲ್ಲಿ ಖಚಿತವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡಿದ್ದರು. ನಾವು ಅದನ್ನು ಅಧಿಕೃತ ಅಂತ ಪರಗಣಿಸುವುದಿಲ್ಲ. ನಾವು ಅವರಿಗೆ ಯಾವುದೇ ರೀತಿಯ ಮಾನ್ಯತೆ ನೀಡಿಲ್ಲ. ನಮ್ಮ ಇಲಾಖೆಯ ಎಫ್‌ಎಸ್‌ಎಲ್ ವರದಿಯಲ್ಲಿ ಆರೋಪಿಗಳು ಪಾಕಿಸ್ತಾನ ಪರ‌ ಘೋಷಣೆ ಕೂಗಿರುವುದು ಖಚಿತವಾಗಿದೆ. ಈ ಆಧಾರದ ಮೇಲೆ‌ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿಯಲಿದ್ದು, ತನಿಖೆಯಿಂದ ಬರುವ ಮಾಹಿತಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಬಿಜೆಪಿಯವರು ಪಕ್ಷದವರು ದಿನಕ್ಕೊಂದು ರೀತಿ ಹೇಳಿಕೆ ನೀಡುತ್ತಾರೆ. ಸಾಕ್ಷ್ಯ ಇಲ್ಲದೆ ಯಾರನ್ನು ಬಂಧಿಸಲಾಗುವುದಿಲ್ಲ. ವರದಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದ್ದು ಇನ್ನೆನು ಬಹಿರಂಗಪಡಿಸಬೇಕು. ಪ್ರಕರಣವನ್ನು ಮುಚ್ಚಿಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದ ಬಿಜೆಪಿಯವರು ಈಗ ಏನು ಹೇಳುತ್ತಾರೆ ಎಂದು ವಿರೋಧ ಪಕ್ಷದವರಿಗೆ ಪರಮೇಶ್ವರ್‌ ಟಾಂಗ್‌ ಕೊಟ್ಟರು.

ಮಂಡ್ಯದಲ್ಲಿ 2022 ನವೆಂಬರ್‌ನಲ್ಲಿ ಬಿಜೆಪಿಯ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆಗ ಅಧಿಕಾರದಲ್ಲಿದ್ದ ಬಿಜೆಪಿಯವರು ಯಾಕೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿಲ್ಲ. ಹಳೆಯ ಪ್ರಕರಣ ಈಗ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಮಂಡ್ಯ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೇಲೆ ಪ್ರಕರಣ ಒಂದೇ ಅಲ್ಲವೇ. ಕಾನೂನು ಎಲ್ಲರಿಗೂ ಒಂದೇ. ಯಾವ ಸಂದರ್ಭದಲ್ಲಿ ಕೂಗಿದ್ದಾರೆ ಎಂಬುದು ತನಿಖೆಯಿಂದ ಹೊರಬರುತ್ತೆ.

ಇನ್ನು ವಿಧಾನಸೌಧದ ಭದ್ರತಾ ವೈಫಲ್ಯ ಇರುವುದು ಕಂಡು ಬಂದರೆ ಇಲಾಖೆಯ ಅಧಿಕಾರಿಗಳು ಖಂಡಿತವಾಗಿಯೂ ಕ್ರಮ ತೆಗೆದು ಕೊಳ್ಳುತ್ತಾರೆ. ಯಾರನ್ನೋ ಕೇಳಿ ಕೆಲಸ ಮಾಡುವ ಅಗತ್ಯತೆ ಇಲ್ಲ ಎಂದು ಕಿಡಿಕಾರಿದರು.

By admin

Leave a Reply

Your email address will not be published. Required fields are marked *

Verified by MonsterInsights