Thursday, January 29, 2026
22.8 C
Bengaluru
Google search engine
LIVE
ಮನೆರಾಜ್ಯ30ಕೋಟಿ ಬಾಕಿ ಹಣ ಬಿಡುಗಡೆ ಮಾಡಿ ಕೇಂದ್ರ ಅರಣ್ಯ ಸಚಿವರಿಗೆ ಖಂಡ್ರೆ ಮನವಿ!

30ಕೋಟಿ ಬಾಕಿ ಹಣ ಬಿಡುಗಡೆ ಮಾಡಿ ಕೇಂದ್ರ ಅರಣ್ಯ ಸಚಿವರಿಗೆ ಖಂಡ್ರೆ ಮನವಿ!

2022-23ನೇ ಸಾಲಿನಲ್ಲಿ ಮಂಜೂರಾಗಿದ್ದ ಸುಮಾರು ೬೦ ಕೋಟಿ ರೂಗಳ ಪೈಕಿ ೩೦ಕೋಟಿ ಬಾಕಿ ಬರಬೇಕಿದ್ದ ಹಣ ಕೂಡಲೇ ಬಿಡುಗಡೆ ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನ ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ.


ದೆಹಲಿಯಲ್ಲಿಂದು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಈಶ್ವರ ಖಂಡ್ರೆ, ಹುಲಿ ಯೋಜನೆಯಡಿ ಕಾಳಿ, ಭದ್ರಾ, ನಾಗರಹೊಳೆ, ಬಂಡಿಪುರ ಮತ್ತು ಬಿಳಿಗಿರಿ ರಂಗನ ಬೆಟ್ಟ ಹೀಗೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಹೊಸ ಕಾಮಗಾರಿಗಳನ್ನು ಕೈಗೊಳ್ಳಲು 61 ಕೋಟಿ ರೂಪಾಯಿ ಸೇರಿ ಒಟ್ಟಾರೆ ಸುಮಾರು 91.99 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಕೋರಿದ್ದು, ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಈಶ್ವರ ಖಂಡ್ರೆ ಸಂತಸ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಅರಣ್ಯ ರಕ್ಷಣೆ ಮತ್ತು ವಿಸ್ತರಣೆಗಾಗಿ ಕಾಂಪಾ ನಿಧಿಯಡಿ 2023-24ರ ಸಾಲಿನಲ್ಲಿ ರಾಜ್ಯದಿಂದ ಸುಮಾರು 362 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 140 ಕೋಟಿ ರೂ.ಗೆ ಮಾತ್ರ ಮಂಜೂರಾತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಉಳಿದ 222 ಕೋಟಿ ಬಾಕಿ ನಿಧಿಯ ಮಂಜೂರಾತಿಗೂ ಮನವಿ ಮಾಡಲಾಗಿದ್ದು, ಇದಕ್ಕೆ ಅಗತ್ಯವಾದ ಎಲ್ಲ ನಿಬಂಧನೆಗಳನ್ನೂ ಪೂರೈಸಲಾಗುವುದು ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

ಅರಣ್ಯ ರಕ್ಷಣೆ ಮತ್ತು ವಿಸ್ತರಣೆಗಾಗಿ ಕಾಂಪಾ ನಿಧಿಯಡಿ 2023-24ರ ಸಾಲಿನಲ್ಲಿ ರಾಜ್ಯದಿಂದ ಸುಮಾರು 362 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 140 ಕೋಟಿ ರೂ.ಗೆ ಮಾತ್ರ ಮಂಜೂರಾತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಉಳಿದ 222 ಕೋಟಿ ಬಾಕಿ ನಿಧಿಯ ಮಂಜೂರಾತಿಗೂ ಮನವಿ ಮಾಡಲಾಗಿದ್ದು, ಇದಕ್ಕೆ ಅಗತ್ಯವಾದ ಎಲ್ಲ ನಿಬಂಧನೆಗಳನ್ನೂ ಪೂರೈಸಲಾಗುವುದು ಎಂದು ಅರಣ್ಯ ಸಚಿವರು ಹೇಳಿದ್ದಾರೆ .

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments