ಗದಗ : ಹೊಳೆ ಆಲೂರು ಗ್ರಾಮದ ರೈಲು ನಿಲ್ದಾಣದಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕೆಲಕಾಲ ರೈಲು ನಿಲ್ದಾಣದಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಇನ್ನು ಗೋವಾದಿಂದ ಕೊಡಗಿನ ಎನ್ ಟಿ.ಪಿ.ಎಸ್ ಉಷ್ಣ ವಿದ್ಯುತ್ ಸ್ಥಾವರಕ್ಕೆ ಸರಬರಾಜು ಮಾಡಲಾಗುತ್ತಿದ್ದ ಕಲ್ಲಿದ್ದಲು ತುಂಬಿದ ಗೂಡ್ಸ್ ರೈಲು ಕಳೆದ ಎರಡ್ಮೂರು ದಿನಗಳಿಂದ ತಾಂತ್ರಿಕ ತೊಂದರೆಯಿಂದಾಗಿ ಹೊಳೆ ಆಲೂರ ನಿಲ್ದಾಣದಲ್ಲಿ ನಿಂತಿದ್ದು, ದಿಢೀರನೆ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಮತ್ತು ಹೊಗೆ ಕಂಡು ಬಂದಿದೆ. ನಿಲ್ದಾಣದಲ್ಲಿನ ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಕೆಲಕಾಲ ಆತಂಕಕ್ಕೀಡು ಮಾಡಿತ್ತು. ಅಗ್ನಿಶಾಮಕ ದಳ ಬೆಂಕಿ ನಂದಿಸಿತು.
ಬೇಸಿಗೆ ಕಾಲವಾಗಿದ್ದರಿಂದ ವಿಪರೀತ ಬಿಸಿಲಿನಿಂದಾಗಿ ಕಲ್ಲಿದ್ದಿಲಿನಲ್ಲಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದು ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಹೆಚ್ಚಿನ ಹಾನಿಯನ್ನು ತಡೆಗಟ್ಟಲಾಯಿತು ಎಂದರು