ಗದಗ: ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಗದಗ ನಗರದಲ್ಲಿ ಟೆಂಪಲ್ ರನ್ ನಡೆಸಿದ್ದಾರೆ. ನಗರದ ಐತಿಹಾಸಿಕ ಶ್ರೀ ವೀರನಾರಾಯಣ ದೇವಸ್ಥಾನ, ಜಗದ್ಗುರು ತೋಂಟದಾರ್ಯ ಮಠ, ಪಂಡಿತ ಪಂಚಾಕ್ಷರಿ ಗವಾಯಿ ಮಠ, ಗಂಗಾಪುರ ಪೇಟೆಯ ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.
ಈ ವೇಳೆ ಕಾರ್ಯಕರ್ತರು ಹೂ-ಮಾಲೆಯನ್ನು ಹಾಕಿ ಶ್ರೀ ವೀರನಾರಾಯಣನ ಭಾವಚಿತ್ರ ನೀಡಿ ನಗರಕ್ಕೆ ಬರಮಾಡಿಕೊಂಡರು. ಇದೆ ವೇಳೆ ವೀರನಾರಾಯಣನ ದೇವಸ್ಥಾನದ ಆವರಣದಲ್ಲಿ ಮಹಿಳೆಯರ ಜೊತೆ ಸ್ಥಳೀಯ ಸಮಸ್ಯೆಗಳನ್ನು ಆಲಿಸಿದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶ್ರೀರಾಮ ಸೇನೆ ರಾಜ್ಯ ಕಾರ್ಯದರ್ಶಿ ರಾಜು ಖಾನಪ್ಪನವರ್, ಕಿಸನ್ ಮೆರವಾಡೆ ಸೇರಿದಂತೆ ಅನೇಕರು ಸಾತ್ ನೀಡಿದರು.