ಗದಗ : ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು. ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.
ರೈತರಿಗೆ ಪ್ರತಿ ಲೀಟರ್ ಗೆ ಸಿಗುವ ಎರಡು ರೂಪಾಯಿ ಸಬ್ಸಿಡಿ ಸಿಗ್ತಿಲ್ಲ. ಬಿಎಸ್ ಯಡಿಯೂರಪ್ಪ ಅವಧಿಯಲ್ಲಿ ಹಾಲು ಉತ್ಪಾದಕನಿಗೆ ಸಹಾಯಧನ ನೀಡುತ್ತಿದ್ದರು. 25 ಲಕ್ಷ ರೈತರಿಗೆ ಸಿಗಬೇಕಾದ 7,18 ಕೋಟಿ ರೂಪಾಯಿ ಸಬ್ಸಿಡಿ ಬಂದ್ ಆಗಿದೆ. ಹಾಲು ಉತ್ಪಾದಕರ ಸಹಾಯಧನ ಬಿಡುಗಡೆಗೆ ಆಗ್ರಹಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದರು.