ಗದಗ : ತೀವ್ರ ಕುತೂಹಲ ಕೇರಳಿಸಿದ್ದ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನದ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿ ಮುಖಂಡ ರಾಜು ಕೂರುಡಗಿ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಕಳೆದ ಎರಡು ದಶಕಗಳಿಂದ ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಾಜು ಕೂರಡಗಿ ನೇಮಕಗೊಂಡಿದ್ದಾರೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯರಾಗಿಯೂ ಪಕ್ಷಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಕಳಕಪ್ಪ ಬಂಡಿ ಹಾಗೂ ನರಗುಂದದ ಬಿಜೆಪಿ ಯುವ ಮುಖಂಡ ಉಮೇಶಗೌಡ್ರ ಪಾಟೀಲ್ ತೀವ್ರ ಪೈಪೋಟಿ ನಡೆಸಿದ್ದರು. ಆದರೆ, ಅಂತಿಮವಾಗಿ ರಾಜೂ ಕೂರಡಗಿ ಆಯ್ಕೆ ಆಗಿದ್ದಾರೆ. ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.