ಗದಗ : ಸಾಲಬಾದೆ ತಾಳಲಾರದೆ ಇಂದು ನಸುಕಿನ ಜಾವ ರೈತ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದ ರೈತ ಬಸಯ್ಯ ಗಣೇಚೆರಿ(45) ಮೃತ ದುರ್ದೈವಿ. ಗ್ರಾಮೀಣ ಬ್ಯಾಂಕ್ ನಲ್ಲಿ 1 ಲಕ್ಷ ಪಡೆದಿದ್ದು ಸಾಲ ಮರುಪಾವತಿ ಮಾಡಲಾಗದೆ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ. ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.