ಗದಗ: 75 ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸಂವಿಧನ ಜಾಗೃತಿ ಜಾಥಾ ಆಯೋಜಿಸಲಾಗಿದೆ. ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರದಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಸಂವಿಧಾನ ಜಾಗೃತಿ ರಥಕ್ಕೆ ಚಾಲನೇ ನೀಡಿದರು.
ತದನಂತರ ಮಾತನಾಡಿದ ಸಚಿವರು ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಸಂವಿಧಾನ ರಕ್ಷಣೆಗೆ ಮುಂದಾಗಬೇಕು. ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನವನ್ನು ಬಲಪಡಿಸಬೇಕಾಗಿದೆ. ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಪ್ರದರ್ಶಿಸಿಸುವ ಸ್ತಬ್ದ ಚಿತ್ರವನ್ನು ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಗ್ರಾಮಪಂಚಾಯಗಳಲ್ಲಿ ಪ್ರದರ್ಶಿಸಿ ಎಲ್ಲಾ ಸಾರ್ವಜನಿಕರಿಗೆ ಅರಿವು ಮೂಡಿಸುವುದರೊಂದಿಗೆ ಅಂತಿಮವಾಗಿ ದಿನಾಂಕ:24ನೇ ಮತ್ತು 25 ನೇ ಫೆಬ್ರುವರಿ 2024 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶಕ್ಕೆ ಬಂದು ಸೇರಲಿವೆ.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಿಂದ ಪ್ರಾರಂಭವಾಗಿ ಫೆ. 23 ರವರೆಗೆ ಗದಗ ಜಿಲ್ಲೆಯ ಎಲ್ಲ 122 ಗ್ರಾಮ ಪಂಚಾಯತಿಗಳಲ್ಲಿ ಮತ್ತು 09 ಸ್ಥಳಿಯ ನಗರ ಸಂಸ್ಥೆಗಳಲ್ಲಿ ಸಂವಿಧಾನ ಜಾಗೃತಿ ಜಾಥ ಕುರಿತು ಸ್ತಬ್ಧ ಚಿತ್ರದ ಮೆರವಣಿಗೆ ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕೊನೆಗೆ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವು ಮುಂಡರಗಿ ತಾಲೂಕಿನಲ್ಲಿ ಅದ್ದೂರಿ ಕಾರ್ಯಕ್ರಮದೊಂದಿಗೆ ಮುಕ್ತಾಯವಾಗುವುದು. ಈ ಕಾರ್ಯಕ್ರಮದಲ್ಲಿ ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದÀ ಅನ್ನಭಾಗ್ಯ, ಗೃಹ ಲಕ್ಷ್ಮೀ, ಶಕ್ತಿ ಯೋಜನೆ, ಗೃಹಜ್ಯೋತಿ ಮತ್ತು ಯುವನಿಧಿಯಂತ ಯೋಜನೆಗಳನ್ನು ಶೇಕಡಾ 100 ರಷ್ಟು ಸಾರ್ವಜನಿಕರಿಗೆ ತಲುಪಿಸಲು ಕ್ರಮಕೈಗೊಳ್ಳಲಾಗಿದೆ. ಹಾಗೂ ಪ್ರಗತಿಯನ್ನು ಸಾದಿಸಲಾಗಿದೆ.
ಸ್ತಬ್ದ ಚಿತ್ರದ ವಾಹನವು ಜಿಲ್ಲೆಯ ಎಲ್ಲ ತಾಲೂಕು ಕೇಂದ್ರ ಮತ್ತು ಎಲ್ಲಾ ಗ್ರಾಮ ಪಂಚಾಯತಗಳ ಕೇಂದ್ರ ಸ್ಥಾನದಲ್ಲಿ ಕಾರ್ಯಕ್ರಮ ಆಯೋಜಿಸಿ ಸಂವಿಧಾನ ಕುರಿತು ಸಾರ್ವಜನಿಕರಿಗೆ ಸಂವಿಧಾನದ ಮಹತ್ವವನ್ನು ತಿಳಿಸಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.