ಗದಗ: ನಗರದ ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರದಲ್ಲಿ ಬುಧವಾರದಂದು ರಾಜ್ಯ ಮಟ್ಟದ ಆಪ್ತ ಸಮಾಲೋಚಕರ ಕಾರ್ಯಾಗಾರದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಜರುಗಿತು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಬಲೂನು ಹಾರಿಸುವ ಮುಖಾಂತರ ಉದ್ಘಾಟಿಸಿ ನಂತರ ಅವರು ಮಾತನಾಡಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸುತ್ತಿರುವುದು ಸಂತೋಷದ ವಿಷಯವಾಗಿದೆ. ಎಲ್ಲ ರಂಗದಲ್ಲಿ ಹೆಣ್ಣು ಮಕ್ಕಳು ಈಗ ಮುಂಚೂಣಿಯಲ್ಲಿದ್ದಾರೆ. ಹೆಣ್ಣು ಮಕ್ಕಳನ್ನು ಉಳಿಸಿ ಹೆಣ್ಣು ಮಕ್ಕಳನ್ನು ಬೆಳೆಸಬೇಕು. ಹೆಣ್ಣು ಮಗುವಿನ ಬಗ್ಗೆ ತಾತ್ಸಾರ ಮಾಡದೇ ಸ್ವಾವಲಂಬಿಯಾಗಲು ಶಿಕ್ಷಣ ನೀಡಬೇಕು. ಸರ್ಕಾರದಿಂದ ಜಾರಿಯಾಗಿರುವ ವಿವಿಧ ಸೌಲಭ್ಯಗಳನ್ನು ಹೆಣ್ಣುಮಕ್ಕಳು ಪಡೆದುಕೊಳ್ಳಬೇಕು ಎಂದರು.