ಗದಗ : ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವನ್ನ ವಿಶೇಷವಾಗಿ ಆಚರಿಸಲು ಮುಂದಾಗಿದ್ದ ಯಶ್ ಅಭಿಮಾನಿಗಳು ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿಗೆ ತಗುಲಿ ಕಟೌಟ್ ಹಿಡಿದಿದ್ದ ಯುವಕರಿಗೆ ವಿದ್ಯುತ್ ಹರಿದಿದೆ. ಇದರ ಪರಿಣಾಮ ಸ್ಥಳದಲ್ಲೇ ಒದ್ದಾಡಿ ಮೂವರು ಯುವಕರು ಪ್ರಾಣ ಬಿಟ್ಟಿದ್ದಾರೆ. ಈ ಹಿನ್ನೆಲೆ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಗದಗ ಜಿಲ್ಲೆಯ ಸೂರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ. ಮೃತ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ಸೂರಣಗಿ ಗ್ರಾಮಕ್ಕೆ ಜನಸಾಗರ ಹರಿದು ಬಂದಿದೆ. ಯಶ್ ಅವರ ಆಗಮನದ ಹಿನ್ನೆಲಯಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಅಕ್ಕಪಕ್ಕದ ಗ್ರಾಮಸ್ಥರು ಯಶ್ ಅವರನ್ನು ನೋಡಲು ಆಗಮಿಸಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಹಾಸಪಟ್ಟಿದ್ದಾರೆ.