ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಇಂದು ಬೆಂಗಳೂರಿಗೆ ಬಂದಿಳಿದಿದ್ದಾರೆ. ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬೆಂಗಳೂರಿಗೆ ಮರಳಿದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ H.D.ಕುಮಾರಸ್ವಾಮಿ ಅವರು ತಮಗೆ ಶುಭ ಕೋರಲು ಬಂದ ಮಂಡ್ಯ ಮತ್ತಿತರೆ ಜಿಲ್ಲೆಗಳ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ತಮ್ಮ ನಿವಾಸದಲ್ಲಿ ಮಾತನಾಡಿದರು.
ಹೆಚ್ಚು ಮಾತನಾಡಬಾರದು, ಆಯಾಸ ಮಾಡಿಕೊಳ್ಳಬಾರದು ಎಂದು ವೈದ್ಯರು ನೀಡಿರುವ ಕಟ್ಟುನಿಟ್ಟಿನ ಸೂಚನೆಯಂತೆ ಮಾಜಿ ಮುಖ್ಯಮಂತ್ರಿಗಳು ತಮ್ಮ ಮನೆಯ ಮೊದಲ ಮಹಡಿಯಲ್ಲೇ ನಿಂತು ಸ್ವಲ್ಪ ಸಮಯವಷ್ಟೇ ಮಾತನಾಡಿದರು.