ಲೋಕಸಭೆ ಚುನಾವಣೆ ಸನಿಹದಲ್ಲಿರುವಾಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಹೃದಯದ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ವೈದ್ಯರ ಸೂಚನೆ ಮೇರೆಗೆ ಮೂರು ದಿನಗಳ ಹಿಂದೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.
ಇಂದು ಬೆಳಗ್ಗೆ ಎಂಟು ಗಂಟೆಗೆ ನುರಿತ ವೈದ್ಯರ ತಂಡ ಕುಮಾರಸ್ವಾಮಿಯವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದಾರೆ. ಇದೀಗ ಕುಮಾರಸ್ವಾಮಿ ಆವರ ಆರೋಗ್ಯ ಸ್ಥಿರವಾಗಿದ್ದು, ಮುಂದಿನ ಎರಡ್ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಮುಂದಿನ ಒಂದು ವಾರದಲ್ಲಿ ಫಿಟ್ ಅಂಡ್ ಫೈನ್ ಆಗಿ ಲೋಕಸಭೆ ಪ್ರಚಾರ ಕಣಕ್ಕೆ ಧುಮುಕಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ. ಹೆಚ್ಡಿ ಕುಮಾರಸ್ವಾಮಿಯವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಜೆಡಿಎಸ್ ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಘೋಷಣೆ ಆಗಲಿದೆ.
ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಖುದ್ದಾಗಿ ಕಣಕ್ಕೆ ಇಳಿಯುವ ಸಂಭವ ಇದೆ. ಒಂದು ವೇಳೆ ಕುಮಾರಸ್ವಾಮಿ ಸ್ಪರ್ಧಿಸದಿದ್ದರೇ 2019ರ ಎಲೆಕ್ಷನ್ ರೀತಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುವುದು ಖಚಿತ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.