ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹೆಚ್ಚಿತ್ತಿದ್ದು, ಸೊಂಕು ಹರಡುವಿಕೆ ತಡೆಗೆ ಸದ್ಯ ರೋಗ ನಿರೋಧಕ ಲಸಿಕೆ ಇಲ್ಲ. ಹೀಗಾಗಿ ಈ ಕಾಯಿಲೆ ಬಗ್ಗೆ ನಿಗಾ ವಹಿಸಲು ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಈಗಾಗಲೆ ಒಟ್ಟು 49 ಮಮಗನ ಖಾಯಿಲೆ ಪ್ರಕರಣಗಳು ವರದಿಯಾಗಿದೆ. ನವೆಂಬರ್ ನಿಂದ ಮೇ ತಿಂಗಳ ಅವಧಿಯಲ್ಲಿ ಕಾಣಿಸಿಕೊಳ್ಳುವ ಮಂಗನ ಖಾಯಿಲೆಯು, ಹಠಾತ್ ಜ್ವರ, ಶರೀರದಲ್ಲಿ ತೀವ್ರ ಸ್ನಾಯುಗಳ ನೋವು, ತಲೆ ನೋವು ಇತ್ಯಾದಿ ರೋಗ ಲಕ್ಷಣಗಳು ಕಂಡು ಬರುತ್ತವೆ.
ಜನವರಿ ೧ರಿಂದ ಫೆಬ್ರವರಿ ೨ರವರೆಗೆ ರಾಜ್ಯದಲ್ಲಿ 258 ಕೆ.ಎಫ್.ಡಿ. (ಎಂಡಮಿಕ್)ಪರೀಕ್ಷೆಯನ್ನು ಆರೋಗ್ಯ ಇಲಾಖೆ ನಡೆಸಿದ್ದರು. ಈ ವೇಳೆ ಮೂರು ಜಿಲ್ಲೆಗಳಿಂದ ಒಟ್ಟು 49 ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ (12), ಉತ್ತರ ಕನ್ನಡ (34) ಹಾಗೂ ಚಿಕ್ಕಮಗಳೂರು (3) ಪ್ರಕರಣ ಪತ್ತೆಯಾಗಿವೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಂದರಂತೆ 2 ಸಾವು ಪ್ರಕರಣ ವರದಿಯಾಗಿವೆ. ರೋಗ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದರು.
ರೋಗ ಲಕ್ಷಣ ಕಂಡು ಬಂದ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪ್ರಾಥಮಿಕ ಚಿಕಿತ್ಸೆ ಪಡೆದು KFD ಪರೀಕ್ಷೆಗೆ ರಕ್ತ ಮಾದರಿಯನ್ನು ನೀಡುವಂತೆ ಆರೋಗ್ಯ ಇಲಾಖೆ ಸೂಚಿಸಿದ್ದಾರೆ. ಕಾಡಿಗೆ ಹೋಗುವ ಮುನ್ನ ಇಲಾಖೆ ಉಚಿತವಾಗಿ ನೀಡುವ DEPA ತೈಲವನ್ನು ಲೇಪಿಸಿಕೊಂಡು ಹೋಗುವಂತೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ಡಿಹೆಚ್ಓ ಗಳು ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದ್ದಾರೆ.