ರಾಜ್ಯಸುದ್ದಿ

ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಬದಲಾವಣೆ ಕೈ ಬಿಡಲು ಅಗ್ರಹ

ಹುಬ್ಬಳ್ಳಿ  : ರಾಜ್ಯದಲ್ಲಿನ ಸರ್ಕಾರಿ ಶಾಲೆ ಸೇರಿದಂತೆ ವಸತಿ ಶಾಲೆಗಳ ಪ್ರವೇಶದಲ್ಲಿರುವ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಬರಹವನ್ನು ಬದಲಾಯಿಸುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಹಾಗೂ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ಅಗ್ರಹಿಸಿ ಹುಬ್ಬಳ್ಳಿಯಲ್ಲಿ ಎಬಿವಿಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ‌ ಆಕ್ರೋಶ ಹೊರಹಾಕಿದರು.‌

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದ ಕಾರ್ಯಕರ್ತರು ಹಾಗೂ ಮುಖಂಡರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ‌

ಸರ್ಕಾರ ಸರ್ಕಾರಿ ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಕೆಲವೊಂದು ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ಇಟ್ಟುಕೊಂಡು ಗೊಂದಲ ಸೃಷ್ಟಿಅಡುವ ಕೆಲಸ ಮಾಡುತ್ತಿದೆ. ಸಮಾಜ‌ ಕಲ್ಯಾಣ ಇಲಾಖೆಯ ಅಧಿನದಲ್ಲಿರುವ ಶಾಲೆಗಳಲ್ಲಿ ನಡೆದುಕೊಂಡು ಬಂದಿದ್ದ ಸರಸ್ವತಿ, ಗಣಪತಿ ಮೊದಲಾದ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧ ಹೇರಿತ್ತು. ಯಾವಾಗ ಅದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತೋ ಅದನ್ನು ಹಿಂಪಡೆದಿಯಲಾಗಿದೆ.

ಈಗ ಸರ್ಕಾರಿ ಶಿಕ್ಷಣ ಕಟ್ಟಡಗಳ ಮುಂದೆ ಕಾಣುವ ಜ್ಞಾನಪೀಠ ಪುರಸ್ಕೃತ ಕುವೆಂಪು ಅವರ ವಾಕ್ಯ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ‌ ಅನ್ನುವು ಬರಹವನ್ನು ಬದಲಾಯಿಸಿ, ಜ್ಞಾನ ದೇಗುಲವಿದು ಧೈರ್ಯ ವಾಗಿ ಪ್ರಶ್ನಿಸಿ ಅಂತಾ ಮಾಡುತ್ತಿದೆ. ಈ‌ ನಿರ್ಧಾರವನ್ನು ನಾವು ತೀವ್ರವಾಗಿ ಖಂಡಿಸುತ್ತದೆ.‌ ಈ ಕೂಡಲೇ ರಾಜ್ಯ ಸರ್ಕಾರ ಈ ಬದಲಾವಣೆಯ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟವನ್ನು ನಾವು ಕೈಗೊಳ್ಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Comments (0)

Your email address will not be published. Required fields are marked *

Back to top button