ಹುಬ್ಬಳ್ಳಿ : ಸಂಸದ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆಯನ್ನು ಖಂಡಿಸಿ ಹಾಗೂ ಸಂಸದ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಅನಂತ್ ಕುಮಾರ್ ಹೆಗಡೆ ಈ ಹಿಂದಿನಿಂದಲೂ ಸಂವಿಧಾನ ಬದಲಾವಣೆ ಮಾತುಗಳನ್ನು ಆಡುತ್ತಲೇ ಬರುತ್ತಿದ್ದಾರೆ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಈ ಹಿಂದಿನಿಂದಲೂ ಸಂವಿಧಾನ ಬದಲಾವಣೆ ಮಾತುಗಳನ್ನು ಆಡುತ್ತಲೇ ಬರುತ್ತಿದ್ದಾರೆ. ಜಗತ್ತಿಗೆ ಮಾದರಿ ಸಂವಿಧಾನವನ್ನು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ನೀಡಿದ್ದಾರೆ ಎಂದರು.
ಬಿಜೆಪಿ ಹಾಗೂ ಸಂಸದ ಅನಂತ್ ಕುಮಾರ್ ಹೆಗಡೆ ಮಾತ್ರ ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದೂ ಸಂವಿಧಾನ ಗೌರವಿಸುವ ದೇಶದ ಜನತೆಗೆ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವಾಗಿದೆ ಎಂದು ಹೇಳಿದರು.