ಹುಬ್ಬಳ್ಳಿ : ರೈತರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿ, ಫೆ.12 ರಂದು ‘ಬೆಂಗಳೂರು ಚಲೋ ರ್ಯಾಲಿ’ ಹಮ್ಮಿಕೊಳ್ಳಲಾಗಿದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ರಾಜ್ಯದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ತಗೆದುಕೊಂಡ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ರೈತರಿಗೆ ಬೆಳೆವಿಮಾ, ಬೆಳೆ ಪರಿಹಾರವನ್ನು ಪ್ರತಿ ಹೆಕ್ಟೇರ್ ಗೆ ೨೫ ಸಾವಿರ ನಿಗದಿಪಡಿಸಬೇಕು, ಮಹಾದಾಯಿ, ಕಳಸಾ-ಬಂಡೂರಿ ನೀರಾವರಿ ಯೋಜನೆ ಶೀಘ್ರವಾಗಿ ಜಾರಿ ಮಾಡಬೇಕು ಸೇರಿದಂತೆ ಮೊದಲಾದ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.
ಈಗಿರುವ ನೀರಾವರಿ ಸಚಿವರನ್ನು ತಗೆದು ನುರಿತ ಶಾಸಕರನ್ನು ನೀರಾವರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ಕ್ರಮ ತಗೆದುಕೊಳ್ಳಬೇಕು. ಫೆ. ೧೧ ರಂದು ರಾತ್ರಿ ಹು-ಧಾ ದಿಂದ ಎರಡು ಸಾವಿರಕ್ಕೂ ಅಧಿಕ ರೈತರು ಬೆಂಗಳೂರಿಗೆ ತೆರಳಿ ಫೆ.೧೨ ರಂದು ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದರು. ಜೊತೆಗೆ ಮಹಾದಾಯಿ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಸಭೆ ಕರೆದು ನಿಯೋಗವನ್ನು ಕೇಂದ್ರದ ಬಳಿ ತಗೆದುಕೊಂಡು ಹೋಗಿ ಸೂಕ್ತ ನಿರ್ಧಾರ ಪ್ರಕಟಸದೇ ಹೋದಲ್ಲಿ, ೧೫ ದಿನಗಳ ನಂತರ ಹು-ಧಾ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.