ಹುಬ್ಬಳ್ಳಿ: ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್’ನ ಗಂಗೋತ್ರಿಯಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ ನೇರವಾದ ಕಾಂಗ್ರೆಸ್ ಪಕ್ಷವೇ, ಈ ಹಿಂದೆ ಮೊಟ್ಟಮೊದಲ ಟ್ರಿಬ್ಯೂನಲ್ ಹೋಗುವ ಅವಶ್ಯಕತೆ ಇರಲಿಲ್ಲ, ಮನಮೋಹನ್ ಸಿಂಗ್ ಪ್ರಧಾನಿಗಳಿದ್ದಾಗ ಟ್ರಿಬ್ಯೂನಲ್ ಮಾಡಿದ್ದು ಕಾಂಗ್ರೆಸ್ ಪಕ್ಷ, ಅದರಿಂದ 8-10 ವರ್ಷ ವಿಳಂಬವಾಯಿತು. ಅತ್ಯಂತ ದೊಡ್ಡ ತಪ್ಪು ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಆರೋಪಿಸಿದರು.

ಟ್ರಿಬ್ಯೂನಲ್’ನಲ್ಲಿ ಬರೆದು ಕೊಟ್ಟು ಮಹದಾಯಿಯಿಂದ ಮಲಪ್ರಭಾ ಇಂಟರ್ ಲಿಂಕಿಂಗ್ ಜೋಡನೆಗೆ ಕಾಂಗ್ರೆಸ್’ನವರು ಗೋಡೆ ಕಟ್ಟಿದ್ದರು, ನೀರಾವರಿ ಯೋಜನೆಗೆ ಗೋಡೆಕಟ್ಟಿದ ಅಪಖ್ಯಾತಿ ಇದ್ದರೆ ಅದು ಕಾಂಗ್ರೆಸ್ ಪಕ್ಷಕ್ಕೆ ಇದೆ. ನಾವು ಕೆನಾಲ್ ಮಾಡಿದ್ರೆ ಇವರು ಗೋಡೆ ಕಟ್ಟಿದರು ಎಂದರು.

ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಇದ್ದಾಗ ಸಂಪೂರ್ಣವಾಗಿ ವಿರೋಧ ಮಾಡತ್ತಾ ಬಂದ್ರು, ನಮ್ಮ ಸರ್ಕಾರ ಗೋವಾದಲ್ಲಿದ್ದರು ಯೋಜನೆಯ ಡಿಪಿಆರ್ ಅನುಮೋದನೆ ಕೊಟ್ಟಿದ್ದು ಬಿಜೆಪಿ, ಇವರ ಕೈಯಲ್ಲಿ ಅಧಿಕಾರದಲ್ಲಿದ್ದು ಡಿಪಿಆರ್ ಅನುಮೋದನೆ ಮಾಡಿಸಲು ಆಗಿರಲಿಲ್ಲ, ಇದೀಗ ಪರಿಸರ ಇಲಾಖೆಯಲ್ಲಿ ಅನುಮೋದನೆಗೆ ಇದೆ. ಅಲ್ಲಿ ದಾಖಲೆಗಳನ್ನು ಕೇಳಿದ್ದಾರೆ. ನಾವು ಒತ್ತಡ ತ‌ಂದು ಪರಿಸರ ಇಲಾಖೆಯಿಂದ ಅನುಮೋದನೆ ಕೊಡಿಸತ್ತೇವೆ ಎಂದು ಹೇಳಿದರು.

ಇದೀಗ ಕಾಂಗ್ರೆಸ್ ಸರ್ಕಾರ ಪರಿಸರ ಇಲಾಖೆಯ ಅನುಮೋದನೆ ಪಡೆಯದೇ ಟೆಂಡರ್ ಮಾಡುವ ಕೆಲಸ ಮಾಡಿದೆ. ಇದರಿಂದ ಕೆಲಸ ಮಾಡಲು ಸಾಧ್ಯವೇ? ಹಾಗಾಗಿ ಗೋವಾ ಸರ್ಕಾರ ಕೋರ್ಟ್’ಗೆ ಹೋಗಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ನೀರಿನ ವಿಚಾರದಲ್ಲಿ ಕೋರ್ಟ್’ನಲ್ಲಿ ಸಮರ್ಥವಾಗಿ ವಾದ ಮಾಡಬೇಕು ಕೃಷ್ಣ, ಮಹದಾಯಿ ಮೇಕೆದಾಟು ವಿಚಾರವಾಗಿ, ಈ ಹಿಂದೆ ಕೃಷ್ಣ ಯೋಜನೆಗೆ 2010 ಡಿಸೆಂಬರ್ ಟ್ರಿಬ್ಯೂನಲ್ ಆದೇಶ ಬಂದಿದೆ. ಅದಾಗ್ಯೂ ಕಾಂಗ್ರೆಸ್ ಒಂದು ವಿರೋಧ ಅರ್ಜಿ ಸಹ ಕೋರ್ಟ್’ಗೆ ಹಾಕಲಿಲ್ಲ ಎಂದು ಹರಿಹಾಯ್ದರು. ಪ್ರಲ್ಹಾದ್ ಜೋಶಿ, ಬಸವರಾಜ ಬೊಮ್ಮಾಯಿ ರಾಜ್ಯದ ಜನತೆಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಾರೆಂಬ ಪ್ರಶ್ನೆಗೆ ಯಾರು ಸುಳ್ಳು ಹೇಳತ್ತಾರೆ ಸತ್ಯ ಹೇಳತ್ತಾರೆ ಜನರಿಗೆ ಗೊತ್ತಿದೆ. ಕಾಂಗ್ರೆಸ್’ನವರು ಸತ್ಯ ಹರಿಶ್ಚಂದ್ರರಾ? ಎಂದು ಕಿಡಿಕಾರಿದರು.

By admin

Leave a Reply

Your email address will not be published. Required fields are marked *

Verified by MonsterInsights