ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶ ನಗರದ ನಿವಾಸದ ಬಳಿ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ಈಶ್ವರಪ್ಪ ನವರ ಮನವೊಲಿಕೆ ಮಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕ್ಷೇತ್ರ ಬದಲಾವಣೆ ಆಗುತ್ತವೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಮೇಶ್ ಜಾರಕಿಹೊಳಿ ಹೈಕಮಾಂಡ್ ಜೊತೆ ಸಂಪರ್ಕದಲ್ಲಿ ಇರಬಹುದು. ಕ್ಷೇತ್ರ ಬದಲಾವಣೆ ಕುರಿತು ಜಾರಕಿಹೊಳಿ ಏನು ಹೇಳಿದ್ದಾರೆ ಎಂದು ಗೊತ್ತಿಲ್ಲ ಎಂದು ಹೇಳಿದರು..
ಇವತ್ತು ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಶಿಗ್ಗಾಂವ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇವೆ. ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರಿಗೂ ಅಹ್ವಾನ ಕೊಡಲಾಗಿದೆ. ಈ ಬಾರಿ ಶಿಗ್ಗಾಂವಿ ಕ್ಷೇತ್ರದಿಂದ ಜೋಶಿ ಅವರಿಗೆ ಕಳೆದ ಬಾರಿಗಿಂತ ಹೆಚ್ಚಿನ ಲೀಡ್ ಕೊಡಿಸುತ್ತೇವೆ. ನಾಳೆ ಹಾವೇರಿ ಲೋಕಸಭೆ ವ್ಯಾಪ್ತಿಯ ಗದಗ ಜಿಲ್ಲೆಗೆ ಭೇಟಿ ನೀಡಲಿದ್ದೇನೆ. ಅಲ್ಲಿ ಪ್ರಚಾರ ಮಾಡಲಿದ್ದೇನರ ಎಂದು ಹೇಳಿದರು.