ರಾಜಕೀಯರಾಜ್ಯಸುದ್ದಿ

ಹುಬ್ಬಳ್ಳಿಯಲ್ಲಿ ಕೈ ಸರ್ಕಾರದ ವಿರುದ್ಧ ಕಮಲ‌ ಕಲಿಗಳು ಆಕ್ರೋಶ

ಹುಬ್ಬಳ್ಳಿ : ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯ ಘಟಕ ಪ್ರತಿಭಟನೆ ಕರೆಗೆ ಬೆಂಬಲಿಸಿ ಹುಬ್ಬಳ್ಳಿಯಲ್ಲಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿ‌ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.‌

ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಹು-ಧಾ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ತಿಪಣ್ಣ ಮಜ್ಜಗಿ ನೇತೃತ್ವದಲ್ಲಿ, ಶಾಸಕ ಮಹೇಶ ಟೆಂಗಿನಕಾಯಿ ಉಪಸ್ಥಿತಿಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರಾಮಮಂದಿರ ರಾಷ್ಟ್ರಮಂದಿರವಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಆಗಮನವನ್ನು ದೇಶವೇ ಸಂಭ್ರಮಿಸುತ್ತಿದೆ. ಅದರಂತೆಯೇ ಮಂಡ್ಯ ಜಿಲ್ಲೆಯಲ್ಲಿ ಕೆರಗೋಡು ಗ್ರಾಮದಲ್ಲಿ ಕೂಡ ಸಂಭ್ರಮ ಮನೆ ಮಾಡಿತ್ತು. ಆದರೆ ಹಿಂದೂ ವಿರೋಧಿ ಕಾಂಗ್ರೇಸ್ ಸರ್ಕಾರ ಸಂಭ್ರಮಕ್ಕೆ ಕೊಳ್ಳಿ ಇಡುವ ಕೆಲಸ ಮಾಡಿದೆ. ಗ್ರಾಮಸ್ಥರ ನಿರ್ಣಯದಂತೆ ಹಾರಿಸಲಾಗಿದ್ದ ಹನುಮಾನ್ ಧ್ವಜವನ್ನು ಹರಿದು ಹಾಕಿದ್ದನ್ನು ಖಂಡಿಸಿದರು. ಬಳಿಕ ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Comments (0)

Your email address will not be published. Required fields are marked *

Back to top button