ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಲೇ, ಇತ್ತ ಡಿಕೆಶಿ ಆಪ್ತರಿಗೆ ಬಿಜೆಪಿ ಗಾಳ ಹಾಕ್ತಿದೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ಅಲ್ಲೋಲ ಕಲ್ಲೋಲವಾಗಿದೆ.
ಧಾರವಾಡ ಜಿಲ್ಲೆಯ ಪಂಚಮಸಾಲಿ ಸಮಾಜದ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಿರೇಶ್ ಉಂಡಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ವಿರೇಶ್ ಉಂಡಿ ನಾಳೆ ಅಂದ್ರೆ ಶುಕ್ರವಾರ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ ಆಗಲಿದ್ದಾರೆ.
ಈ ಮೂಲಕ ಬಿಜೆಪಿ ಹಾಗೂ ವಿರೇಶ್ ಉಂಡಿ ಹುಬ್ಬಳ್ಳಿ-ಧಾರವಾಡದಲ್ಲಿ ಕಾಂಗ್ರೆಸ್ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.