ಹುಬ್ಬಳ್ಳಿ : ಹುಬ್ಬಳ್ಳಿ ತಹಶೀಲ್ದಾರ್ ಕಚೇರಿಗೆ ಇಂದು ಮುಂಜಾನೆ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಂದ ಸರ್ಪೈಸ್ ವಿಸಿಟ್ ನೀಡಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಬಿಸಿ ಮುಟ್ಟಿಸಿದರು.
ನಗರದ ಮಿನಿ ವಿಧಾನಸೌಧದ ಕಚೇರಿಯಲ್ಲಿನ ತಹಶೀಲ್ದಾರರ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದರು. ಸಚಿವರು, ತಹಶೀಲ್ದಾರರ ಕಚೇರಿ, ಸಬ್ ರಿಜಿಸ್ಟರ್ ಕಚೇರಿ ಸೇರಿದಂತೆ ವಿವಿಧ ಕಡೆ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ಪ್ರವಾಸದ ನಡುವೆಯೂ ಬಿಡುವು ಮಾಡಿಕೊಂಡ ಸಚಿವರು ಹುಬ್ಬಳ್ಳಿಯಲ್ಲಿ ದಿಢೀರ್ ಭೇಟಿ ನೀಡಿದ್ದರು. ಇಲಾಖೆ ಕಾರ್ಯವೈಖರಿ ತಿಳಿಯುವ ನಿಟ್ಟಿನಲ್ಲಿ ಈ ಭೇಟಿ ನೀಡಿದ್ದೇನೆ. ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಕಂದಾಯ ಇಲಾಖೆಯಲ್ಲಿ ಏಜೆಂಟರ್ ಹಾವಳಿ ತಪ್ಪಿಸಲು ಸಹ ಕ್ರಮ ತೆಗೆದುಕೊಳ್ಳುವ ಪ್ಲಾನ್ ಮಾಡಿದ್ದೇವೆ. ಏಕಗವಾಕ್ಷಿ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ದಾಖಲೆಗಳನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.