ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹದಾಯಿ ಅನುಷ್ಠಾನಕ್ಕೆ ಅಗ್ರಹಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಹೋರಾಟಕ್ಕೆ ಅಟೋ ಚಾಲಕರು ಮತ್ತು ಮಾಲೀಕರು ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ ಸಾಥ್ ನೀಡಿದ್ರು.
ತಹಶಿಲ್ದಾರರ ಕಚೇರಿಗೆ ಆಗಮಿಸಿ ರೈತರು ತಹಶಿಲ್ದಾರರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮಹದಾಯಿ ಕಾಮಗಾರಿ ಶೀಘ್ರವೇ ಆರಂಭಿಸಬೇಕೆಂದು ರೈತರು ಒತ್ತಾಯಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ವಿವಿಧ ಮಠಾಧೀಶರ ಕೂಡ ಭಾಗಿಯಾಗಿದ್ರು.