Wednesday, July 2, 2025
20.9 C
Bengaluru
Google search engine
LIVE
ಮನೆರಾಜಕೀಯಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ : ಮಹೇಶ ಟೆಂಗಿನಕಾಯಿ

ಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ : ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಚ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ ಕಾಂಗ್ರೆಸ್’ಗೆ ಬುದ್ದಿ ಕಲಿಸತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಿಡಿಕಾರಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಯಾವಾಗ ಯಾವಾಗ ಅಧಿಕಾರಕ್ಕೆ ಬಂದಿದೆ. ಆಗ ಬೆಂಕಿ ಹಚ್ಚುವ ಕೆಲಸ ಆಗಿದೆ. ಈ ಹಿಂದೆ ಹುಬ್ಬಳ್ಳಿ, ಮಂಗಳೂರು ಸೇರಿದಂತೆ ಇನ್ನಿತರ ಕಡೆಗೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತಿದ್ದವು. ಇದೀಗ ಶಕ್ತಿ ಕೇಂದ್ರ ವಿಧಾನಸೌಧದಲ್ಲಿಯೇ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ. ಆದರೆ ಈವರೆಗೆ ಆರೋಪಿಗಳ ಬಂಧನ ಆಗುತ್ತಿಲ್ಲ. ಇದು ಅಲ್ಪಸಂಖ್ಯಾತರ ತುಷ್ಟಿಕರಣ ರಾಜಕಾರಣವಾಗಿದೆ ಎಂದರು.

ರಾಜ್ಯಸಭಾ ಚುನಾವಣೆ ವೇಳೆ ನಾಸಿರ್ ಹುಸೇನ್ ಬೆಂಗಲಿಗರು ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದಾರೆ. ಈ ಬಗ್ಗೆ ನಾಸಿರ್ ಹುಸೇನ್ ಅವರು ಸೌಜನ್ಯಕ್ಕಾದರೂ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಹೇಳಿಲ್ಲ. ಸರ್ಕಾರ ಕೂಡಾ ಗಂಭೀರವಾಗಿ ಪರಿಗಣಿಸದೇ ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದೆ. ಎಫ್ಐಆರ್ ನಲ್ಲಿ ತಳ್ಳಾಟ, ನುಕ್ಕಾಟ ಎಂದು ಕೇಸ್ ಹಾಕಲಾಗಿದೆ. ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದವರ ವಿರುದ್ಧ ದೇಶದ್ರೋಹಿ ಕೇಸ್ ಹಾಕುವ ಬದಲಾಗಿ ಅವರ ರಕ್ಷಣೆಗೆ ಸರ್ಕಾರ ಮುಂದಾಗಿದೆ ಇದು ಖಂಡನೀಯ. ಗೃಹ ಸಚಿವರು ತಮ್ಮ ತಾಕತ್ತು ತೋರಿಸುವ ಕೆಲಸ ಮಾಡಬೇಕು. ಕುಟುಕಿದ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣ ಮಾಡಲು ನಾವು ಸಹಕಾರ ಕೊಡುತ್ತೇವೆ.ಇದೀಗ ರಾಜ್ಯವನ್ನು ಕಾಂಗ್ರೆಸ್ ಪ್ರಯೋಗಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಇದೇ ವೇಳೆ ಧಾರವಾಡ ಲೋಕಸಭಾ ಟಿಕೆಟ್ ವಿಚಾರವಾಗಿ ಮಾತನಾಡಿ, ಪಕ್ಷದ ಹೈಕಮಾಂಡ ಈ ಬಗ್ಗೆ ತೀರ್ಮಾಣ ತೆಗೆದುಕೊಳ್ಳುತ್ತದೆ. ಪ್ರಲ್ಹಾದ್ ಜೋಶಿ ಉತ್ತಮ ಕಾರ್ಯ ಮಾಡಿದ್ದು, ಕೇಂದ್ರದಿಂದ ಸಾಕಷ್ಟು ಅನುದಾನ ತರುವ ಕೆಲಸ ಮಾಡಿದ್ದಾರೆ. ಅವರೇ ನಮ್ಮ ಅಭ್ಯರ್ಥಿ ಆಗಬೇಕೇಂಬುದು ಪಕ್ಷದ ಕಾರ್ಯಕರ್ತರ ಅಪೇಕ್ಷೆ ಆಗಿದೆ ಎಂದು ಹೇಳಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments