ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನಿರೀಕ್ಷೆಯಂತೆ ಸತತ 5ನೇ ಬಾರಿ ತಮಗೆ ಸಿಕ್ಕಿದ್ದು, ಸರ್ವರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿಯಾಗಿರುವೆ ಎಂದು ಸಚಿವ ಪ್ರಹ್ಲಾದ ಜೋಶಿ ಟ್ವಿಟ್ ಮಾಡಿದ್ದಾರೆ. ಕಳೆದ ಇಪ್ಪತ್ತು ವರ್ಷಗಳಿಂದ ಧಾರವಾಡ ಲೋಕಸಭಾ ಕ್ಷೇತ್ರದ ಜನರ ಪ್ರೀತಿ, ಆಶೀರ್ವಾದ ಮತ್ತು ಪಕ್ಷ ನಿಷ್ಠೆಗೆ ಪೂರಕವಾಗಿ ಸರ್ವ ರೀತಿಯ ಕೆಲಸ ಮಾಡುತ್ತಾ ಬಂದ ನನಗೆ ಪಕ್ಷದ ಹೈಕಮಾಂಡ್ ಮತ್ತೆ ಟಿಕೆಟ್ ನೀಡುವ ಮೂಲಕ ಅಭಿವೃದ್ಧಿ ಹೊಣೆಗಾರಿಕೆ ನೀಡಿದೆ ಎಂದು ಹೇಳಿದ್ದಾರೆ.
ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಸಚಿವನಾಗಿ ಪ್ರಮುಖ ಖಾತೆಗಳನ್ನು ನಿರ್ವಹಿಸುವ ಅವಕಾಶ ದೊರೆತಿದ್ದು, ಕಿಂಚಿತ್ತೂ ಸಮಸ್ಯೆಯಾಗದಂತೆ ಸೇವೆ ಸಲ್ಲಿಸಿದ್ದೇನೆ ಎಂದು ಪ್ರಹ್ಲಾದ ಜೋಶಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈಗ ಪಕ್ಷದ ವರಿಷ್ಟರು ಮತ್ತು ಜನರ ಆಶೀರ್ವಾದದಿಂದ ಇದೀಗ ಮತ್ತೆ ಐದನೇ ಬಾರಿಗೆ ಧಾರವಾಡದ ಜನರ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಎಲ್ಲರಿಗೂ ಧನ್ಯವಾದ ಅರ್ಪಿಸುವೆ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.