ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಲೇ ದೆಹಲಿಯಿಂದ ಹುಬ್ಬಳ್ಳಿಗೆ ಬಂದ ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರಿಗೆ ಬೆಂಬಲಿಗರು ಮತ್ತು ಕಾರ್ಯಕರ್ತರು ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ವರಿಷ್ಟರು ನಿರೀಕ್ಷೆಯಂತೆ ಪ್ರಹ್ಲಾದ ಜೋಶಿ ಅವರಿಗೆ 5ನೇ ಬಾರಿ ಸ್ಪರ್ಧೆಗೆ ಟಿಕೆಟ್ ಘೋಷಣೆ ಮಾಡುತ್ತಲೇ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳ ಖುಷಿಗೆ ಪಾರವೇ ಇರಲಿಲ್ಲ. ಜೋಶಿ ಅವರು 5ನೇ ಬಾರಿ ಸ್ಪರ್ಧೆಗೆ ಅಣಿಯಾಗಿ ಹುಬ್ಬಳ್ಳಿಗೆ ಆಗಮಿಸುತ್ತಲೇ ಬೆಂಬಲಿಗರು, ಹಿತೈಷಿಗಳು ಪುಷ್ಪ ಗುಚ್ಛ ನೀಡಿ, ಹೂವಿನ ಹಾರ ಹಾಕಿ ಸ್ವಾಗತಿಸಿದ್ದಾರೆ.