ಹುಬ್ಬಳ್ಳಿ: ಮಾಜಿ ಸಿಎಂ ಯಡಿಯೂರಪ್ಪ ಅವರ ಪೋಕ್ಸೋ ಪ್ರಕರಣದಲ್ಲಿ ಆಡಳಿತ ಪಕ್ಷದ ಷಡ್ಯಂತ್ರವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ನೂರಕ್ಕೆ ನೂರರಷ್ಟು ಸರ್ಕಾರದ ಷಡ್ಯಂತ್ರ ಇದು ಎಂದು ಆರೋಪಿಸಿದರು.
ಯಡಿಯೂರಪ್ಪ ಅವರ ವಯಸ್ಸೇನು? ಅವರ ಹಿರಿತನ ವೇನು? ಅವರ ಸ್ಟೇಟಸ್ ಏನು? ಅವರ ವಿರುದ್ಧ ಈ ರೀತಿ ಷಡ್ಯಂತ್ರ ಮಾಡುವುದು ಎಂದರೆ ಎಂಥಾ ಅನ್ಯಯವಿದು ಎಂದು ಸಚಿವ ಜೋಶಿ ತೀವ್ರ ಅಡಮಾಧಾನ, ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಒಬ್ಬ ಪ್ರಭಾವಿ, ಹಿರಿಯ ರಾಜಕಾರಣಿ ಮೇಲೆ ಈ ರೀತಿ ಸುಳ್ಳು ದೂರು ದಾಖಲಿಸುವುದು ನಿಜಕ್ಕೂ ಅಕ್ಷಮ್ಯ ಎಂದ ಸಚಿವ ಜೋಶಿ, ಕಾನೂನು ರೀತಿ ತನಿಖೆ ಆಗುತ್ತದೆ. ಅವರು ಇದರಿಂದ ಹೊರಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.