ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ವಿರುದ್ಧ ಶಾಸಕ ಪ್ರಸಾದ್ ಅಬ್ಬಯ್ಯ ಅಭಿಮಾನಿಗಳಿಂದ ಪ್ರತಿಭಟನೆ ನಡೆಸಿದರು.
ಪ್ರಸಾದ್ ಅಬ್ಬಯ್ಯ ಅಭಿಮಾನಿ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರಮೋದ್ ಮುತಾಲಿಕ ಅವರು ದಲಿತ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ದಲಿತ ಶಾಸಕ ಪ್ರಸಾದ್ ಅಬ್ಬಯ್ಯರವರಿಗೆ ಅವಮಾನ ಹೇಳಿಕೆ ನೀಡಿದ್ದಾರೆ ಎಂದು ನಗರದ ಮಿನಿವಿಧಾನಸೌಧ ತಹಶಿಲ್ದಾರ ಕಚೇರಿ ಮುಂಭಾಗದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಹು-ಧಾ ಪೂರ್ವ ಕ್ಷೇತ್ರದಲ್ಲಿ ಅಭಿವೃದ್ಧಿ ಹರಿಕಾರರಾಗಿ ಗುರುತಿಸಿಕೊಂಡಿರುವ ಅಬ್ಬಯ್ಯವರಿಗೆ ಅಬ್ಬಯ್ಯಾನೋ ಅಥವಾ ಅಬ್ದುಲ್ಲಾನೋ ಎಂದು ಪದ ಬಳಕೆ ಮಾಡಿದ್ದಾರೆ. ಇದು ಕ್ಷೇತ್ರದ ಮತದಾರರಿಗೆ ಮಾಡಿರುವ ಅವಮಾನವಾಗಿದೆ ಎಂದು ಪ್ರಮೋದ್ ಮುತಾಲಿಕ್ ವಿರುದ್ಧ ಕಿಡಿಕಾರಿದರು.
ಈ ಕುರಿತು ತಹಶಿಲ್ದಾರ ಮೂಲಕ ಗೃಹ ಮಂತ್ರಿಗೆ ಹೋರಾಟಗಾರರು ಮನವಿ ಸಲ್ಲಿಸಿದ್ದು, ಅಬ್ಬಯ್ಯ ಅವರ ಬಗ್ಗೆ ಅವಮಾನ ಮಾಡುವ ಹೇಳಿಕೆ ನೀಡಿರುವ ಮುತಾಲಿಕ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.