ರಾಜ್ಯಸುದ್ದಿ

ಹುಬ್ಬಳ್ಳಿಯಲ್ಲಿ ಕುರಿಗಾಹಿಗಳಿಂದ ವಿನೂತನ ಪ್ರತಿಭಟನೆ

ಹುಬ್ಬಳ್ಳಿ : ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ ಖಂಡಿಸಿ ಕುರಿಗಾಹಿಗಳಿಂದ ವಿನೂತನ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದ್ದು, ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಕುರಿಗಳೊಂದಿಗೆ ಮೆರವಣಿಗೆ ಮಾಡಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಶುಪಾಲಕರು ಮತ್ತು ಕುರಿಗಾರರ ಮೇಲೆ ನಿರಂತರ ದೌರ್ಜನ ನಡಿಯುತ್ತಿವೆ. ದೌರ್ಜನ್ಯ ತಡೆಗಟ್ಟುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆಂದು ಆರೋಪದ ಮೇಲೆ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಆಗ್ರಹಿಸಿದರು.

ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಕುರಿಗಾಹಿಯಿಂದ ಹಫ್ತಾ ಕೇಳಿದ್ದ ಅರಣ್ಯ ಇಲಾಖೆ ಸಿಬ್ಬಂಧಿ ವಿರುದ್ಧ ಆಕ್ರೋಶ ಹೊರಹಾಕಿದ್ರು. ಕುರಿಗಾರರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

Comments (0)

Your email address will not be published. Required fields are marked *

Back to top button