ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ ಶೆಟ್ಟರ್ ಅವರ ಹೆಸರೇ ಇದೆ. ಅವರೂ ಅಲ್ಲಿ ಸ್ಪರ್ಧೆ ಮಾಡುವುದಾಗಿ ಒಪ್ಪಿದ್ದಾರೆ ಎಂದು ತಿಳಿಸಿದರು.
ತಮಗೆ ಗೊತ್ತಿರುವ ಹಾಗೆ ಬಿಜೆಪಿ ಲಿಸ್ಟ್ ಅಲ್ಲಿ ಸದ್ಯ ಜಗದೀಶ ಶೆಟ್ಟರ್ ಅವರ ಹೆಸರೇ ಮುಂಚೂಣಿ ಇದೆ. ಈ ಬಗ್ಗೆ ರಾಷ್ಟ್ರೀಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಜೋಶಿ ಪ್ರತಿಕ್ರಿಯಿಸಿದರು. ಜೆಡಿಎಸ್ 3 ಕ್ಷೇತ್ರ ಕೇಳೋದು ಸಹಜ: ರಾಜ್ಯದಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ 3 ಕ್ಷೇತ್ರಗಳನ್ನು ಕೇಳುವುದು ಸಹಜವೇ ಇದೆ. ಈ ಬಗ್ಗೆ ಇನ್ನೂ ಯಾವುದು ಫೈನಲ್ ಆಗಿಲ್ಲ. ಸದ್ಯದಲ್ಲೇ ಪಕ್ಷದ ವರಿಷ್ಟರು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಪ್ರಹ್ಲಾದ ಜೋಶಿ ಹೇಳಿದರು.