ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದೆ. ಅಷ್ಟರೊಳಗೆ ಈಶ್ವರಪ್ಪ ಅವರಲ್ಲಿ ಸಾಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡುತ್ತ, ಅವರ ಮನವೊಲಿಕೆ ಪ್ರಯತ್ನ ನಡೆದಿದೆ ಎಂದು ಹೇಳಿದರು.

ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಪುತ್ರನಿಗೆ ಹಾವೇರಿ ಟಿಕೆಟ್ ಸಿಗದಿದ್ದಕ್ಕೆ ಸಿಟ್ಟಾಗಿದ್ದಾರೆ ಅಷ್ಟೇ. ಚುನಾವಣೆಯೊಳಗೆ ಎಲ್ಲ ಸರಿ ಹೋಗಲಿದೆ ಎಂದು ತಿಳಿಸಿದರು. ಶಿವಮೊಗ್ಗ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಇರೋದು ಏಪ್ರಿಲ್ 26ಕ್ಕೆ. ಇನ್ನೂ 40 ದಿನಗಳ ಕಾಲಾವಕಾಶವಿದೆ. ಅಷ್ಟರೊಳಗೆ ಸಾಕಷ್ಟು ಬದಲಾಣೆ ಆಗುತ್ತದೆ ಎಂದು ಹೇಳಿದರು.

ಈಶ್ವರಪ್ಪ ಅವರ ಬಂಡಾಯ ಶಮನವಾಗಲಿದೆ. ಆ ನಿಟ್ಟಿನಲ್ಲಿ ಪಕ್ಷದ ವರಿಷ್ಟರು ಅವರೊಂದಿಗೆ ಮಾತುಕತೆ ನಡೆಸಿ ಇಲ್ಲ ಸರಿ ಮಾಡಲಿದ್ದಾರೆ ಎಂದು ತಿಳಿಸಿದರು. ಮೂರ್ನಾಲ್ಕು ದಿನಗಳಲ್ಲಿ ಬಹಿರಂಗ ಪ್ರಚಾರಕ್ಕೆ ಸಿದ್ಧತೆ: ಚುನಾವಣೆ ತಯಾರಿ ನಡೆದಿದೆ. ಸದ್ಯ ಪಕ್ಷದಲ್ಲಿ ಆಂತರಿಕವಾಗಿ ಸಭೆ ನಡೆಯುತ್ತಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಳಿಯಲಾಗುತ್ತದೆ ಎಂದು ಪ್ರಹ್ಲಾದ ಜೋಶಿ ತಿಳಿಸಿದರು.

ಈ ಬಾರಿ ಚುನಾವಣೆಗೆ 50 ದಿನಗಳಷ್ಟು ಸುದೀರ್ಘ ಅವಧಿ ಸಿಕ್ಕಿದೆ. ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿ ಪ್ರಚಾರ ಕಾರ್ಯಕ್ಕೆ ಇಳಿಯಲಾಗುವುದು ಎಂದು ಹೇಳಿದರು.

By admin

Leave a Reply

Your email address will not be published. Required fields are marked *

Verified by MonsterInsights